ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯರಿಗೆ ಸಚಿವರಾದ ಭೈರತಿ ಸುರೇಶ್, ಚಲುವರಾಯಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್ ನೀಡಿದರು.
ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಭೇಟಿಯಾಗಿದ್ದೆವು. ನಬಾರ್ಡ್ನ ಕೃಷಿ ಸಾಲವನ್ನು ಶೇಕಡಾ.58ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತ ಕಾಯುವಂತೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


