ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25ರ ಭಾಗವಾಗಿ ಭಾರತ ಕ್ರಿಕೆಟ್ ತಂಡ ತನ್ನ ಕೊನೆಯ ಟೆಸ್ಟ್ ಸರಣಿಯನ್ನು ನವೆಂಬರ್ 22ರಿಂದ ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆ ( ನವೆಂಬರ್ 22 ) ಪರ್ತ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಈ ಹಿಂದೆ ನಾಲ್ಕು ಪಂದ್ಯಗಳು ನಡೆಯುತ್ತಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಈ ಬಾರಿ ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳು ನಡೆಯಲಿವೆ. ಸರಣಿಯ ಮೊದಲ ಟೆಸ್ಟ್ ನವೆಂಬರ್22 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಗಳನ್ನು ಭಾರತದಲ್ಲಿ ಯಾವಾಗ ಮತ್ತು ಯಾವ ಸಮಯದಲ್ಲಿ ವೀಕ್ಷಿಸಬಹುದು ಎಂಬ ಮಾಹಿತಿ ಮುಂದಿದೆ ಓದಿ..
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಬೇಕೆಂದರೆ ಭಾರತ ಆಸ್ಟ್ರೇಲಿಯಾವನ್ನು ಕನಿಷ್ಠ 4-0 ಅಂತರದಿಂದ ಸೋಲಿಸಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿರುವ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಬೇಕಾಗಿದೆ. ಆದರೆ ಈ ಬಾರಿ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಭಾರತಕ್ಕೆ ಕಠಿಣ ಸವಾಲನ್ನು ನೀಡಲು ಸಂಪೂರ್ಣವಾಗಿ ಸಿದ್ಧವಾಗಿದೆ.
ನೇರಪ್ರಸಾರ: ಟೆಸ್ಟ್ ಸರಣಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರವಾಗಲಿದೆ. ಇದಲ್ಲದೆ, ಅಭಿಮಾನಿಗಳು ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಶನ್ ಮೂಲಕ ಸರಣಿಯ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಸಮಯ: ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯ ಭಾರತೀಯ ಕಾಲಮಾನದಲ್ಲಿ ಬೆಳಗ್ಗೆ 7.50ಕ್ಕೆ ಪಂದ್ಯ ಆರಂಭವಾಗಲಿದೆ. ಮೊದಲ ಸೆಷನ್ ಬೆಳಗ್ಗೆ 7.50ರಿಂದ 9.50ರವರೆಗೆ ನಡೆಯಲಿದೆ. ಊಟದ ವಿರಾಮ ಬೆಳಿಗ್ಗೆ 9.50 ರಿಂದ 10.30 ರವರೆಗೆ ಇರುತ್ತದೆ. ಎರಡನೇ ಸೆಷನ್ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ. ಮಧ್ಯಾಹ್ನ 12.30 ರಿಂದ 12.50 ರವರೆಗೆ ಚಹಾ ವಿರಾಮ ಇರುತ್ತದೆ. ಮೂರನೇ ಸೆಷನ್ ಮಧ್ಯಾಹ್ನ 12.50ರಿಂದ 2.50ರವರೆಗೆ ನಡೆಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


