ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಎಂಬ ಹೆಸರೇಳಿ ಜನರ ಅನ್ನ ಕಸಿದುಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ರೇಷನ್ ಕಾರ್ಡ್ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್ನಲ್ಲಿ ವಾಸಿಸುತ್ತಿರುವ ಜನರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಪ್ರಶ್ನೆ ಮಾಡಿದರೆ ಅವರು ತೆರಿಗೆ ಕಟ್ಟುವವರು ಎಂದು ಹೇಳುತ್ತಾರೆ. ಅವರೆಲ್ಲಾ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು.
ಇನ್ನು ಬಿಪಿಎಲ್ ಕಾರ್ಡ್ ರದ್ದಾದರೆ ಅಕ್ಕಿ ಮಾತ್ರ ರದ್ದಾಗಲ್ಲ. ಔಷಧಿ, ಆಸ್ಪತ್ರೆ, ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಬಡ ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಇದು ಯೂಟರ್ನ್ ಸರ್ಕಾರ. ಸಿದ್ದರಾಮಯ್ಯರ ಸರ್ಕಾರ ಜನ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


