ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ 1,02,509 ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆ. ಸರ್ಕಾರಿ ನೌಕರರನ್ನು ಪರಿಶೀಲಿಸಿ ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಶೇಕಡಾ 66ರಷ್ಟು ಬಿಪಿಎಲ್ ಕಾರ್ಡ್‌ಗಳಿವೆ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಬಿಪಿಎಲ್‌ಗೆ ಅರ್ಹರಿದ್ದು, ಎಪಿಎಲ್‌ಗೆ ವರ್ಗಾವಣೆ ಆಗಿದ್ದರೆ ಅಂತಹವರನ್ನು ಪರಿಶೀಲನೆ ಮಾಡಲಾಗುತ್ತದೆ. ಮತ್ತೆ ಅವರನ್ನು ಬಿಪಿಎಲ್ ಕಾರ್ಡ್‌ಗೆ ಸೇರಿಸಲಾಗುತ್ತದೆ. ಈಗ ಅನರ್ಹ ಇರಬಹುದು ಎಂದು ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲಾಗಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ಆದಾಯ ತೆರಿಗೆ ಕಟ್ಟುವವರು, ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


