ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ.
ಕಳೆದ 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ್ದರು.
ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಇತ್ತೀಚೆಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್ ಅವರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು.
ಮನೋಹರ್ ಅವರು ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನ ಹುಟ್ಟೂರು ಅಕ್ಕಿಹೊಳೆ ಗ್ರಾಮದಲ್ಲಿ ಮನೋಹರ್ ಅವೃ ಅಂತ್ಯಕ್ರಿಯೆ ನಡೆಸಲಾಗುತ್ತದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


