ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ. ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದೆ. ಅದರೆ ಇದನ್ನು ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


