ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಭೇಟಿಯ ಹಿಂದಿನ ಉದ್ದೇಶವಾದರೂ ಏನು ಎಂದು ಪ್ರಶ್ನೆ ಮಾಡಿದರು. ಈ ಬೆಳವಣಿಗೆಗಳನ್ನು ಗಮನಿಸಿದಾಗ ಲೋಕಾಯುಕ್ತ ಅಧಿಕಾರಿಗಳ ಬಗ್ಗೆಯೇ ನಮಗೆ ಅನುಮಾನ ವ್ಯಕ್ತವಾಗಿದೆ ಎಂದರು.
ಇನ್ನು ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ಪ್ರಾಮಾಣಿಕ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ ಎ1 ಆರೋಪಿ ಸಿದ್ದರಾಮಯ್ಯ ಅವರೇ ರಾಜ್ಯ ಸರ್ಕಾರ ನಡೆಸುತ್ತಿದ್ದಾರೆ. ಈ ಮಧ್ಯೆ ಎ3 ಆರೋಪಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಹಿರಿಯ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ಕಿಡಿಕಾರಿದರು.
ಬಳಿಕ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆಗ ಮಾತ್ರ ಸಿಬಿಐನವರು ಯಾವ ಪ್ರಭಾವಿಗಳ ಮುಲಾಜಿಲ್ಲದೆ ತನಿಖೆ ನಡೆಸುತ್ತಾರೆ ಎಂದು ಆಗ್ರಹಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


