Wednesday, September 2, 2026
spot_img
More
    spot_img
    HomeSportsCricketAshes 2025: ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್; ನೇರಪ್ರಸಾರ ವೀಕ್ಷಿಸುವುದು ಹೇಗೆ?

    Ashes 2025: ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್; ನೇರಪ್ರಸಾರ ವೀಕ್ಷಿಸುವುದು ಹೇಗೆ?

    ಬೆಂಗಳೂರು: ಕ್ರಿಕೆಟ್‌ ಲೋಕದ ಅತಿ ರೋಚಕ, ಜನಪ್ರಿಯ, ಎಲ್ಲ ಕ್ರಿಕೆಟ್‌ ಸರಣಿಗಳ ತಾಯಿ ಸರಣಿ ಎಂದೇ ಖ್ಯಾತಿಯನ್ನು ಪಡೆದಿರುವ ಆಶಸ್‌ ಟೆಸ್ಟ್‌ ಸರಣಿ ಇಂದಿನಿಂದ ( ನವೆಂಬರ್‌ 21 ) ಆರಂಭಗೊಳ್ಳುತ್ತಿದೆ. ಈ ಮೂಲಕ ಅಪ್ಪಟ ಕ್ರಿಕೆಟ್‌ ಅಭಿಮಾನಿಗಳಿಗೆ ನೈಜ ಕ್ರಿಕೆಟ್‌ನ ಅಮೋಘ ಅನುಭವ ಮತ್ತೆ ಸಿಗಲಿದೆ.

    Advertisement

    ಮೊದಲ ಪಂದ್ಯ ಪರ್ತ್‌ನಲ್ಲಿ ನಡೆಯುತ್ತಿದ್ದು, ಪಂದ್ಯ ಆಸ್ಟ್ರೇಲಿಯಾದ ಕಾಲಮಾನದ ಪ್ರಕಾರ ಬೆಳಗ್ಗೆ 10. 20ಕ್ಕೆ ಶುರುವಾಗಲಿದ್ದು, ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 7.50ಕ್ಕೆ ಶುರುವಾಗಲಿದೆ. ಇನ್ನು ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಇಂಗ್ಲೆಂಡ್‌ ಬ್ಯಾಟಿಂಗ್‌ ಆರಿಸಿಕೊಂಡಿದೆ.

    ಇನ್ನು ಈ ಪಂದ್ಯ ಭಾರತದಲ್ಲಿ ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದ್ದು, ಒಟಿಟಿ ವೇದಿಕೆಯಾದ ಜಿಯೊ ಹಾಟ್‌ಸ್ಟಾರ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಆಗಲಿದೆ.

    ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಉಸ್ಮಾನ್ ಖ್ವಾಜಾ, ಜೇಕ್ ವೆದರಾಲ್ಡ್, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಯಾನ್, ಬ್ರೆಂಡನ್ ಡಾಗೆಟ್, ಸ್ಕಾಟ್ ಬೋಲ್ಯಾಂಡ್

    ಇಂಗ್ಲೆಂಡ್ (ಪ್ಲೇಯಿಂಗ್ XI): ಬೆನ್ ಡಕೆಟ್, ಝಾಕ್ ಕ್ರಾಲಿ, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸ್, ಜೊಫ್ರಾ ಆರ್ಚರ್, ಮಾರ್ಕ್ ವುಡ್

    Ashes 2025: ಸಣ್ಣ ಬೂದಿಗಾಗಿ ಆಸ್ಟ್ರೇಲಿಯಾ – ಇಂಗ್ಲೆಂಡ್‌ ನಡುವೆ ರಕ್ತಪಾತ; ಏನಿದು ಬೂದಿಯ ಕಪ್?‌ ಇದಕ್ಕಾಗಿ ಯಾಕೆ ಇಷ್ಟು ಕಿತ್ತಾಟ?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading