Wednesday, September 2, 2026
spot_img
More
    spot_img
    HomeLatest newsರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರತ್ಯೇಕ ತರಗತಿ ಪ್ರಾರಂಭಕ್ಕೆ ಸರ್ಕಾರ ಅಸ್ತು

    ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರತ್ಯೇಕ ತರಗತಿ ಪ್ರಾರಂಭಕ್ಕೆ ಸರ್ಕಾರ ಅಸ್ತು

    ಬೆಂಗಳೂರು: ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿವಾರು ಎಲ್‍ಕೆಜಿ, ಯುಕೆಜಿ ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯಸರ್ಕಾರ ಅನುಮತಿ ನೀಡಿದೆ.

    Advertisement

    ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2804 ಸರ್ಕಾರಿ ಶಾಲೆಗಳು ಹಾಗೂ 126 ಪಿಎಂಶ್ರೀ ಶಾಲೆಗಳೂ ಸೇರಿದಂತೆ ಒಟ್ಟಾರೆ 2930 ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗುತ್ತಿರುವ ಪೂರ್ವ ಪ್ರಾಥಮಿಕ ತರಗತಿಗಳಿಗೆ ತಗಲುವ ವೆಚ್ಚವನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅನುದಾನದಲ್ಲಿ ಭರಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಅನುಮತಿ ನೀಡಲಾಗಿದೆ.

    ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗುವ1126 ಪೂರ್ವ ಪ್ರಾಥಮಿಕ ತರಗತಿಗಳಿಗೆ ತಗಲುವ ವೆಚ್ಚವನ್ನು ಕಲ್ಯಾಣಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಭರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸೂಚಿಸಲಾಗಿದೆ.

    2018-19ನೇಸಾಲಿನಿಂದ 2024-25ನೇ ಸಾಲಿನವರೆಗೆ ಪ್ರಾರಂಭವಾಗಿರುವ 2619 ಪೂರ್ವ ಪ್ರಾಥಮಿಕ ತರಗತಿಗಳನ್ನು ಮುಂದುವರಿಸುವುದು, ಸರ್ಕಾರಿ ಶಾಲೆಗಳಲ್ಲಿ ನಡೆಸಲಾಗುತ್ತಿರುವ ಪೂರ್ವ ಪ್ರಾಥಮಿಕ ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮ ನಡೆಸಲು ಕ್ರಮವಹಿಸಬೇಕು. ತರಗತಿಗಳನ್ನು ಬೆಳಗ್ಗೆ 10ರಿಂದ ಮದ್ಯಾಹ್ನ 3.30ರವರೆಗೆ ನಡೆಸುವುದು. ಈ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಸ್ಥಳೀಯವಾಗಿ ಪ್ರಚಾರ ಮಾಡಬೇಕು. ಎಲ್‍ಕೆಜಿಗೆ 4-5 ವರ್ಷ ವಯೋಮಿತಿಯ ಮಕ್ಕಳನ್ನು ದಾಖಲು ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ಕೊಠಡಿಯನ್ನು ಸಜ್ಜುಗೊಳಿಸಬೇಕು. ಒಂದು ತರಗತಿಗೆ ಗರಿಷ್ಠ 40 ಮಕ್ಕಳನ್ನು ಮಾತ್ರ ದಾಖಲಿಸಬೇಕು ಎಂಬುದು ಸೇರಿದಂತೆ ಹಲವು ನಿಬಂಧನೆಗಳನ್ನು ವಿಧಿಸಲಾಗಿದೆ.

    ಪ್ರತೀ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕರು ಹಾಗೂ ಸಿಬ್ಬಂದಿಯನ್ನುನಿಗದಿಪಡಿಸಿದ ಮಾನದಂಡಗಳಂತೆ ಶಾಲಾ ಎಸ್‍ಟಿಎಂಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳುವುದು. ಶಿಕ್ಷಕರಿಗೆ ಪಿಯುಸಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು ಮತ್ತು ಎಲ್‍ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್ ಪದವಿ ಪಡೆದವರನ್ನು ಪರಿಗಣಿಸಬೇಕು. ಆಯ್ಕೆಯಾದ ತರಗತಿವಾರು ಶಿಕ್ಷಕರು ಹಾಗೂ ಆಯಾ ಅವರನ್ನು ಶೈಕ್ಷಣಿಕ ವರ್ಷದ ಮಾರ್ಚ್ 31ರವರೆಗೆ ಮಾತ್ರ ನೇಮಕ ಮಾಡಿಕೊಳ್ಳಬೇಕು. ಕ್ಷೇತ್ರ ಶೀಕ್ಷಣಾಧಿಕಾರಿಗಳು ತಮ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ

    ರಕ್ಷಿತಾ ಕಂಡು ಪಿತ್ತ ನೆತ್ತಿಗೇರಿಸಿಕೊಂಡ ಸುದೀಪ್‌, ಅಶ್ವಿನಿ ಗೌಡ ಹಾಗೂ ರಿಷಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು; ವಿಡಿಯೊ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading