ಬೆಂಗಳೂರು: ಸದ್ಯ ವಿಶ್ವ ಕ್ರಿಕೆಟ್‌ನ ರೂಲರ್ ಎಂದೇ ಖ್ಯಾತಿಯನ್ನು ಪಡೆದಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸಿದೆ. ನಗರದಲ್ಲಿರುವ ಕೊಹ್ಲಿ ಒಡೆತನದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್ ಕಳುಹಿಸಿದೆ.
ಹೌದು, ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗ ವಿರಾಟ್ ಕೊಹ್ಲಿ ಒಡೆತನದ ʼಒನ್ 8 ಕಮ್ಯೂನ್ʼ ಎಂಬ ಹೈಟೆಕ್ ಬಾರ್ ಅಂಡ್ ರೆಸ್ಟೋರೆಂಟ್ ಇದೆ. ಈ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಹಾಗೂ ಎನ್‌ಒಸಿ ಪರವಾನಿಗೆ ಪಡೆಯದೇ ಇರುವುದರಿಂದ ಕಾನೂನು ಉಲ್ಲಂಘನೆಯಾಗಿದೆ.
ಸಾಮಾಜಿಕ ಕಾರ್ಯಕರ್ತ ಎಚ್‌ಎಂ ವೆಂಕಟೇಶ್ ಎಂಬುವವರು ಈ ಕುರಿತು ದೂರನ್ನು ನೀಡಿದ್ದು, ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ. ಇನ್ನು ಈ ಹಿಂದೆಯೇ ಒಂದು ಬಾರಿ ಬಿಬಿಎಂಪಿ ನೋಟಿಸ್ ಜಾರಿ ಮಾಡಿದ್ದು, ಇದುವರೆಗೂ ಕೊಹ್ಲಿ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ ಈ ಬಾರಿ ಲಿಖಿತ ಉತ್ತರವನ್ನು ಕೇಳಿದೆ. ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


