ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ಭಾರತ ಇಂಗ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ನಾಯಕ ಜೋಸ್ ಬಟ್ಲರ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 132 ರನ್ ಗಳಿಸಿ ಆಲ್‌ಔಟ್ ಆಗಿ 133 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೇವಲ 12.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಬಾರಿಸಿತು.
ಇಂಗ್ಲೆಂಡ್ ಇನ್ನಿಂಗ್ಸ್: ಫಿಲಿಪ್ ಸಾಲ್ಟ್ 0, ಬೆನ್ ಡಕೆಟ್ 4, ಜೋಸ್ ಬಟ್ಲರ್ 68, ಹ್ಯಾರಿ ಬ್ರೂಕ್ 17, ಲಿಯಾಮ್ ಲಿವಿಂಗ್‌ಸ್ಟನ್ 0, ಜೇಕಬ್ ಬೆಥಲ್ 7, ಜೆಮಿ ಓವರ್‌ಟನ್ 2, ಗಸ್ ಏಟ್ಕಿನ್‌ಸನ್ 2, ಜೋಫ್ರಾ ಆರ್ಚರ್ 12, ಮಾರ್ಕ್ ವುಡ್ 1 ಹಾಗೂ ಆದಿಲ್ ರಶೀದ್ ಅಜೇಯ 8 ರನ್ ಗಳಿಸಿದರು.
ಭಾರತದ ಪರ ವರುಣ್ ಚಕ್ರವರ್ತಿ 3 ವಿಕೆಟ್ ಮತ್ತು ಅರ್ಷ್‌ದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು.
ಭಾರತದ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸಾಮ್ಸನ್ 26 ರನ್ ಗಳಿಸಿದರೆ, ಅಬ್ಬರಿಸಿದ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 79 ರನ್ ಗಳಿಸಿದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ ಶೂನ್ಯ, ತಿಲಕ್ ವರ್ಮಾ ಅಜೇಯ 19 ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 3 ರನ್ ಗಳಿಸಿದರು.
ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಎರಡು ವಿಕೆಟ್ ಹಾಗೂ ಆದಿಲ್ ರಶೀದ್ ಒಂದು ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


