Saturday, August 8, 2026
spot_img
More
    spot_img
    HomeLatest newsಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ: ನೇರ ಸಂದರ್ಶನ ಮೂಲಕ ನೇಮಕಾತಿ

    ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ: ನೇರ ಸಂದರ್ಶನ ಮೂಲಕ ನೇಮಕಾತಿ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉತ್ತರ ಕನ್ನಡ (DHFWS Uttara Kannada) ಇಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್(General Duty Medical Officer) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕಾರವಾರ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಕೆ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಹುದ್ದೆಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಯಾವುದೇ ಪರೀಕ್ಷೆ ಇರುವುದಿಲ್ಲ. ಅರ್ಹ ಮತ್ತು ಆಸಕ್ತ ಎಂಬಿಬಿಎಸ್(MBBS) ಪದವೀಧರರು ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.

    Advertisement

    ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉತ್ತರ ಕನ್ನಡ

    ಹುದ್ದೆಯ ಹೆಸರು: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್

    ಒಟ್ಟು ಹುದ್ದೆಗಳು: 39

    ಉದ್ಯೋಗ ಸ್ಥಳ: ಕಾರವಾರ – ಕರ್ನಾಟಕ

    ವೇತನ : ಮಾಸಿಕ ರೂ.60,000.

    ನೇಮಕಾತಿ ವಿಧಾನ: ನೇರ ಸಂದರ್ಶನದ ಮೂಲಕ.

    ಅಧಿಕೃತ ವೆಬ್‌ಸೈಟ್: uttarakannada.nic.in

    • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 18-01-2025
    • ವಾಕ್-ಇನ್ ದಿನಾಂಕ: 31-01-2025

    ವಿದ್ಯಾರ್ಹತೆ

    DHFWS ಉತ್ತರ ಕನ್ನಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS ಅನ್ನು ಪೂರ್ಣಗೊಳಿಸಿರಬೇಕು.ಕರ್ನಾಟಕ ಮೆಡಿಕಲ್ ಕೌನ್ಸಿಲ್‌ ನಲ್ಲಿ ರಿಜಿಸ್ಟ್ರೇಷನ್‌ ಪಡೆದಿದ್ದು, ಪ್ರಮಾಣ ಪತ್ರ ಪಡೆದಿರಬೇಕು.ಕಾರ್ಯಾನುಭವ ಇದ್ದಲ್ಲಿ, ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು ಅಥವಾ ನೇರ ಸಂದರ್ಶನದ ವೇಳೆ ಹಾಜರುಪಡಿಸುವುದು.

    ವಯೋಮಿತಿ:

    DHFWS ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಹೊಂದಿರಬೇಕು.

    ಅರ್ಜಿಶುಲ್ಕ:

    DHFWS ಉತ್ತರ ಕನ್ನಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಅರ್ಜಿಸಲ್ಲಿಸುವ ವಿಧಾನ:

    ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

    ಸಂದರ್ಶನದ ವಿಳಾಸ:

    Office of District Health & Family Welfare Officer’s, Karwar, Uttara Kannada, Karnataka ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08382-226339 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading