ಮಂಗಳೂರು: ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿಗೆ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು ಸಮನಾಗಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದೆ. ಎಲ್ಲರಿಗೂ ನ್ಯಾಯ ಸಿಗುವ ಉದ್ದೇಶವಿದೆ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬುವುದು ಪ್ರಮುಖ ಉದ್ದೇಶ. ಎಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದರು.
ಇನ್ನು ಈ ಸಮೀಕ್ಷೆಯಲ್ಲಿ 90% ಜನರಿಂದ ಮಾಹಿತಿ ಪಡೆದಿದ್ದಾರೆ. ನಾವಿನ್ನೂ ವರದಿ ತೆರೆದು ಅಧ್ಯಯನ ಆರಂಭಿಸಿದ್ದೇವೆ. ಇದಕ್ಕೆ ಸಮಯ ಬೇಕು. ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನವಿಲ್ಲ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


