ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ಕೂಡ ತೆರಳಿದ್ದಾರೆ.
ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇಲ್ಲಿಯವರೆಗೆ ಒಟ್ಟು 27 ಮಂದಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಶಿವಮೊಗ್ಗದ ಉದ್ಯಮಿ ಮಂಜುನಾಥ್ ಹಾಗೂ ಹಾವೇರಿ ಮೂಲದ ಭರತ್ ಭೂಷಣ್ ಎಂಬ ಇಬ್ಬರು ಕನ್ನಡಿಗರೂ ಸಹ ಗುಂಡೇಟಿಗೆ ಬಲಿಯಾಗಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


