ರಾಮನಗರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಕೆ ಶಿವಕುಮಾರ್ ( dk shivakumar ) ಯಾವಾಗ ಸಿಎಂ ಆಗಲಿದ್ದಾರೆ ಎಂಬುದರ ಕುರಿತು ಹೇಳಿಕೆಗಳು ಬರುತ್ತಲೇ ಇವೆ.
ಇನ್ನು ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಅಧಿಕಾರ ಸ್ವೀಕರಿಸುತ್ತೇವೆ ಎಂದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣಬೇಕಷ್ಟೆ ಅವರಿಗೆ ಯಾರು ಸಿಎಂ ಸ್ಥಾನ ಬಿಟ್ಟುಕೊಡುತ್ತಾರೆ ಎಂದು ವ್ಯಂಗ್ಯವಾಡಿದ್ದರು.
ಈ ಹೇಳಿಕೆಗೆ ಶಾಸಕ ಇಕ್ಬಾಲ್ ಪ್ರತಿಕ್ರಿಯಿಸಿದ್ದು ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲೂ ಕಾಂಗ್ರೆಸ್ ಒಂದು ಸರ್ಕಾರವನ್ನು ಕೊಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ, 200% ಮಾದಪ್ಪನಾಣೆಗೂ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರ ಕಮಿಷನ್ ಸರ್ಕಾರ ಎಂದ ಎಚ್‌ಡಿಕೆ ಹೇಳಿಕೆಗೆ ತಿರುಗೇಟು ಕೊಟ್ಟ ಇಕ್ಬಾಲ್ ಅವರು ಎಷ್ಟು ಕೊಟ್ಟಿದ್ದಾರೆ ಎಂದು ಮೊದಲು ಹೇಳಲಿ ಎಂದು ಟಾಂಗ್ ಕೊಟ್ಟರು.
ಕೃಷಿ ಎಐ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
JDS: ಜೆಡಿಎಸ್‌ಗೆ ಮರು ಸೇರ್ಪಡೆಯಾದ ಕೃಷ್ಣ ನಾಯಕ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


