Friday, September 4, 2026
spot_img
More
    spot_img
    HomeLatest newsಶಾಸಕ ಬಿ.ಆರ್‌.ಪಾಟೀಲ್‌ಗೆ ಕಾಂಗ್ರೆಸ್‌ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ ಗಂಭೀರ ಆರೋಪ | BR Patil

    ಶಾಸಕ ಬಿ.ಆರ್‌.ಪಾಟೀಲ್‌ಗೆ ಕಾಂಗ್ರೆಸ್‌ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ ಗಂಭೀರ ಆರೋಪ | BR Patil

    ನೆಲಮಂಗಲ: ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕ ಬಿ.ಆರ್.‌ಪಾಟೀಲ್‌ಗೆ ( br patil ) ಕಾಂಗ್ರೆಸ್‌ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಸತಿ ನಿಗಮದಲ್ಲಿ ನಡೆದಿರುವ ಗೋಲ್‌ಮಾಲ್‌ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ಕಿಡಿಕಾರಿದರು.

    ಕಾಂಗ್ರೆಸ್‌ ಶಾಸಕ ಬಿ.ಆರ್.‌ಪಾಟೀಲ್‌ ಪರ ಬ್ಯಾಟ್‌ ಬೀಸಿದ ವಿಜಯೇಂದ್ರ ಅವರು, ಪಾಟೀಲ್‌ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲ್‌ರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೇ ಬೇರೆ ಯಾವುದೇ ಯೋಜನೆಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸರ್ಕಾರ ಇದ್ದಾಗ ಬಡವರಿಗೆ ಅನೇಕ ಯೋಜನೆಗಳು ಇದ್ದವು. ಅವೆಲ್ಲವನ್ನು ಕಾಂಗ್ರೆಸ್‌ ಸರ್ಕಾರ ಮರೆತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

    ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಅಮೇರಿಕಾ ದಾಳಿಗೂ ಜಗ್ಗದ ಇರಾನ್:‌ ಇಸ್ರೇಲ್‌ ಮೇಲೆ ಬ್ಯಾಲಿಸ್ಟಿಕ್‌ ಮಿಸೈಲ್‌ಗಳ ಸುರಿಮಳೆ | Iran – Israel Conflict


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading