ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ( hd kumaraswamy ) ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿ ಇಲಾಖೆಯಲ್ಲೂ ಕಮಿಷನ್ ಆಧಾರದಲ್ಲಿ ಲಂಚ ಸ್ವೀಕರಿಸಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿಯವರದ್ದು ಭ್ರಷ್ಟ ಸರ್ಕಾರ ಎಂದು ಟೀಕಿಸಿದ್ದಾರೆ.
ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ಹಣ ನೀಡಿದವರಿಗೆ ವಸತಿ ನೀಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆಡಿಯೊ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ ಶಾಸಕರು ಒಂದು ಕಾರ್ಯವನ್ನು ಜಾರಿಗೆ ತರಬೇಕೆಂದರೆ ಸಾಕಷ್ಟು ಕಮಿಷನ್ ನೀಡಬೇಕು ಎಂದು ಆರೋಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಆಗುವುದರ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿ ಕುಮಾರಸ್ವಾಮಿ ʼಅವರು ಸಿಎಂ ಆಗೋ ಕನಸು ಕಾಣಬೇಕು ಅಷ್ಟೇ, ಯಾರ್ ಬಿಟ್ಕೊಡ್ತಾರೆ ಅವ್ರಿಗೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಈ ಮೂಲಕ ಈ ಬಾರಿಯ ಅವಧಿಯಲ್ಲೂ ಸಹ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದಿಲ್ಲ ಎಂದು ಎಚ್‌ಡಿಕೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Arjuna: ನಾಳೆ ಹುತಾತ್ಮ ಆನೆ ಅರ್ಜುನನ ಸ್ಮಾರಕ ಉದ್ಘಾಟನೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


