ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದ್ದು, ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ( Karnataka Rains ) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಜಲಾಶಯ ಭರ್ತಿಯಾದರೆ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


