ಬೆಂಗಳೂರು: ಜೆಡಿಎಸ್ ( jds ) ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ್ ನೀಡಿ ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಬೆಂಬಲಿಗರೊಂದಿಗೆ ಕೃಷ್ಣ ನಾಯಕ್ ಜೆಡಿಎಸ್‍ಗೆ ಮರಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ದೂರ ಸರಿದಿದ್ದರು. ಈಗ ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದು. ಇವರು ರಾಜ್ಯದ ವಿಧಾನಸಭಾ ಚುನಾವಣೆಯ ಘೋಷಿತ ಮೊದಲ ಅಭ್ಯರ್ಥಿಯಾಗಲಿದ್ದಾರೆ ಎಂದರು.
ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣನಾಯಕ ಅವರು ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಇದಕ್ಕಾಗಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಮೇರಿಕಾ ದಾಳಿಗೂ ಜಗ್ಗದ ಇರಾನ್: ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ | Iran – Israel Conflict
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


