ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ( krs ) ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಈ ಮೂಲಕ ಕೆಆರ್ಎಸ್ ಜಲಾಶಯ ಹೊಸ ದಾಖಲೆ ಬರೆಯಲು ಸಿದ್ಧವಾಗಿದ್ದು, ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಸಾಮಾನ್ಯವಾಗಿ ಜುಲೈ ಅಂತ್ಯ ಹಾಗೂ ಆಗಸ್ಟ್ನಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಮುಂಗಾರು ಮಳೆ ಅವಧಿಗಿಂತ ಮುಂಚೆಯೇ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ 119.40 ಅಡಿ ಭರ್ತಿಯಾಗಿದೆ.
ಜಲಾಶಯದ ಇಂದಿನ ಒಳಹರಿವು 13,359 ಕ್ಯೂಸೆಕ್ಸ್ಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 42.291 ಟಿಎಂಸಿ ನೀರು ಸಂಗ್ರಹವಾಗಿದೆ.
ನೀರಾವರಿ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ಒಳಹರಿವು ಇದೇ ರೀತಿ ಇದ್ದರೆ ಇನ್ನೊಂದು ವಾರದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಹೇಳಲಾಗುತ್ತಿದ್ದು, ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಡಿಕೆಶಿ ಸಿಎಂ ಆಗೋ ಕನಸು ಕಾಣಬೇಕು ಅಷ್ಟೇ, ಯಾರ್ ಬಿಟ್ಕೊಡ್ತಾರೆ ಅವ್ರಿಗೆ; ಎಚ್ಡಿಕೆ ವ್ಯಂಗ್ಯ | HD Kumaraswamy
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


