Tuesday, August 4, 2026
spot_img
More
    spot_img
    HomeLatest newsಸಿದ್ದರಾಮಯ್ಯಗೆ ಸ್ಥಿರತೆ ಹಾಗೂ ಸಾಮರ್ಥ್ಯ ಎರಡೂ ಇದೆ: ಸಚಿವ ಎಚ್.ಸಿ.ಮಹದೇವಪ್ಪ

    ಸಿದ್ದರಾಮಯ್ಯಗೆ ಸ್ಥಿರತೆ ಹಾಗೂ ಸಾಮರ್ಥ್ಯ ಎರಡೂ ಇದೆ: ಸಚಿವ ಎಚ್.ಸಿ.ಮಹದೇವಪ್ಪ

    ಬೆಂಗಳೂರು: ಸಿದ್ದರಾಮಯ್ಯ 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಸ್ಥಿರತೆ ಮತ್ತು ಸಾಮಥ್ರ್ಯ ಎರಡೂ ಇದೆ. ಅದರ ಹೊರತಾಗಿ ನಡೆಯುವ ಚರ್ಚೆಗಳ ಬಗ್ಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಈಗ ಯಾವುದೇ ಚರ್ಚೆಗಳು ಆಗಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗಲೆಲ್ಲಾ ನಾವು ಹೋಗಿ ಭೇಟಿ ಮಾಡುತ್ತೇವೆ. ಅದರಲ್ಲಿ ಏನೂ ವಿಶೇಷ ಇರುವುದಿಲ್ಲ ಎಂದು ಹೇಳಿದರು.

    ಸಿದ್ದರಾಮಯ್ಯನವರು ರಾಜಕೀಯ ಜೀವನದಲ್ಲಿ 40 ವರ್ಷ ಕಳೆದಿದ್ದಾರೆ. ಆರಂಭದಿಂದಲೂ ನಾನು ಅವರ ಜೊತೆಯಲ್ಲಿದ್ದೇನೆ. ಎಂದೂ ಸ್ವಜನ ಪಕ್ಷಪಾತ ಮಾಡಿಲ್ಲ. ಆದರೆ ಮುಡಾ ಪ್ರಕರಣದಲ್ಲಿ ವಿರೋಧ ಪಕ್ಷಗಳು ಸಿದ್ದರಾಮಯ್ಯನವರ ಚಾರಿತ್ರ್ಯ ಹರಣ ಮಾಡಿದ್ದವು. ಈಗ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಛೀಮಾರಿ ಹಾಕಿದೆ. ನ್ಯಾಯಾಲಯ ಹಾಗೂ ಸಂವಿಧಾನದ ಮೇಲಿನ ನಮ್ಮ ನಂಬಿಕೆ ಸ್ಥಿರವಾಗಿದೆ ಎಂದರು.

    ಆರೋಪಗಳಿಂದಾಗಿ ಸಿದ್ದರಾಮಯ್ಯ ಹೆದರಿರಲಿಲ್ಲ. ತಪ್ಪೇ ಮಾಡಿಲ್ಲ ಎಂದ ಮೇಲೆ ಆತಂಕಗೊಳ್ಳುವ ಅಗತ್ಯವಿರುವುದಿಲ್ಲ. ಆದರೆ ಅನಗತ್ಯವಾದ ಟೀಕೆಗಳಿಂದ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿಯವರು ಮಾನಸಿಕವಾಗಿ ನೊಂದಿದ್ದರು. ತಪ್ಪು ಮಾಡದಿದ್ದ ಅವರಿಗೆ ಈ ರೀತಿಯ ತೊಂದರೆಗಳಾಗಬಾರದಿತ್ತು ಎಂದು ಹೇಳಿದರು.

    ಸುಪ್ರೀಂಕೋರ್ಟ್‍ನ ತೀರ್ಪಿನಿಂದ ಸಿದ್ದರಾಮಯ್ಯನವರ ನೈತಿಕ ಶಕ್ತಿ ಹೆಚ್ಚಾಗಿದೆ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಮಹದೇವಪ್ಪ, ಅವರೊಬ್ಬ ಜನನಾಯಕ. ಯಾವುದೋ ಒಂದು ಕಾರಣದಿಂದ ಅವರು ಮಾಸ್ ಲೀಡರ್ ಆಗಿಲ್ಲ. ಮೊದಲಿನಿಂದಲೂ ಜನಪ್ರಿಯತೆ ಕಾಯ್ದುಕೊಂಡೇ ಇದ್ದಾರೆ. ಬಿಜೆಪಿಯವರು ಸುಳ್ಳನ್ನೇ ಸತ್ಯ ಮಾಡಲು ಹೋಗಿದ್ದರು. ಅದಕ್ಕೆ ತಕ್ಕ ಫಲ ಅನುಭವಿಸುತ್ತಾರೆ ಎಂದರು.

    ಮಂಡ್ಯ: ವಿದ್ಯುತ್‌ ಸ್ಪರ್ಶಕ್ಕೆ ಆನೆ ಬಲಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading