ಯೆಮೆನ್: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.
ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆ.ಎ.ಪಾಲ್ ಈ ಬಗ್ಗೆ ಹೇಳಿಕೊಂಡಿದ್ದಾರೆ.
ಕೆ.ಎ.ಪಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಮತ್ತು ಜಾಗತಿಕ ಶಾಂತಿ ಉಪಕ್ರಮದ ಸಂಸ್ಥಾಪಕ ಡಾ.ಕೆ.ಎ.ಪಾಲ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ಡಾ.ಕೆ.ಎ.ಪಾಲ್ ಅವರು ವಿಡಿಯೋ ಸಂದೇಶದಲ್ಲಿ ಯೆಮೆನ್ ನಾಯಕರಿಗೆ ಧನ್ಯವಾದ ಅರ್ಪಿಸಿದರು ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.
ನರ್ಸ್ ನಿಮಿಷಾ ಪ್ರಿಯಾ ಕೇರಳ ಮೂಲದ ಭಾರತೀಯ ನರ್ಸ್ ಆಗಿದ್ದು, ಯೆಮೆನ್‌ನಲ್ಲಿ 2017ರಲ್ಲಿ ಬ್ಯುಸಿನೆಸ್ ಪಾಟ್ನರ್ ಕೊಲೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು.
ಬಾಗಲಕೋಟೆ: ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವನ್ನು ಇರಿದು ಕೊಂದ ಸ್ವಂತ ಚಿಕ್ಕಪ್ಪ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


