Tuesday, November 3, 2026
spot_img
More
    spot_img
    HomeStateDistrictಮಂಡ್ಯ: ವಿದ್ಯುತ್‌ ಸ್ಪರ್ಶಕ್ಕೆ ಆನೆ ಬಲಿ

    ಮಂಡ್ಯ: ವಿದ್ಯುತ್‌ ಸ್ಪರ್ಶಕ್ಕೆ ಆನೆ ಬಲಿ

    ಮಂಡ್ಯ: ಖಾಸಗಿ ಜಮೀನಿನಲ್ಲಿ ಕಾಡಾನೆಗೆ ವಿದ್ಯುತ್‌ ಸ್ಪರ್ಶಿಸಿದ ಪರಿಣಾಮ ಕಾಡಾನೆಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಮೀಪದ ಕರಲಕಟ್ಟೆ ಗ್ರಾಮದಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ನಡೆದಿದೆ.

    ಕರಲಕಟ್ಟೆ ಗ್ರಾಮದ ಹೊರವಲಯದಲ್ಲಿರುವ ಎಚ್‌.ಸಿ. ರಮೇಶ ಎಂಬುವರು ತೋಟದಲ್ಲಿ ಫಸಲು ತಿನ್ನಲು ಬರುವ ಕಾಡಾನೆಗಳ ದಾಳಿಯನ್ನು ತಡೆಯಲು ತಮ್ಮ ಜಮೀನಿನ ಸುತ್ತಲೂ ಸೋಲಾರ್ ತಂತಿ ಎಳೆದು ವಿದ್ಯುತ್‌ ಸಂಪರ್ಕ ನೀಡಿದ್ದರು.

    ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಗಳು ಎಚ್.ಸಿ.ರಮೇಶ್ ಅವರ ಜಮೀನಿನಲ್ಲಿ ಸಂಚರಿಸಲು ಹೋದಾಗ ವಿದ್ಯುತ್‌ ಸ್ಪರ್ಶ ಆಗಿ ಹಿಂದೆ ಸರಿದಿವೆ. ಸುಮಾರು 30 ವರ್ಷದ ಒಂದು ಗಂಡಾನೆಯು ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ಸಿಪಿಐ ಬಿ.ಎಸ್‌. ಶ್ರೀಧರ್, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಮಧುರ ಮೂರ್ತಿ, ಪಿಎಸ್‌ಐ ಲೋಕೇಶ, ಜೆಸ್ಕಾಂ ಮಳವಳ್ಳಿ
    ಗ್ರಾಮೀಣ ಉಪ ವಿಭಾಗದ ಎಇಇ ನಿತೇಶ್ ಕುಮಾರ್, ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ತಜ್ಞ ವೈದ್ಯರಾದ ಡಾ.ವಸೀಂ ಮತ್ತು ಡಾ.ನವೀನ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಆನೆಯ ಪಾರ್ಥಿವ ಶರೀರವನ್ನು ಸೋಮವಾರ ಸಂಜೆ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪದವೀಧರರಿಗೆ ಉದ್ಯೋಗಾವಕಾಶ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search