ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ಕರ್ನಾಟಕ ಕರಾ ವಳಿ ಭಾಗದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ರೆಡ್ ಅಲರ್ಟ್?
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದರೆ, ಕೊಡಗು, ಹಾಸನ, ಚಿಕ್ಕಮಗ ಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ 2 ದಿನಗಳು ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಯೆಲ್ಲೋ ಅಲರ್ಟ್
ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಗಳೂರು, ಶೃಂಗೇರಿ, ಕೊಪ್ಪ, ಕಳಸ, ಸೋಮವಾರಪೇಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಿರಿ: ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಾಗಲಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗೋಸಾಯಿ ಬಾಗನ್‌ನ ಭೂತದ ಕಥೆ: ಪುಟ್ಟ ಹೆಣ್ಣು ಮಗುವಿನ ದೆವ್ವ ಕಂಡು ಸಮೀಪಕ್ಕೆ ಹೋದ ಯುವಕನ ಪಾಡು!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


