ಬೆಂಗಳೂರು (ಆಗಸ್ಟ್ 22): ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕಿ ಕುಸುಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾಗಿರುವ ಕುಸುಮಾ ಅವರ ಮುದ್ದಿನಪಾಳ್ಯದ ನಿವಾಸದಲ್ಲಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಎರಡು ಇನ್ನೋವಾ ಕಾರುಗಳಲ್ಲಿ ಬಂದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು, ಕೇಂದ್ರದ ಭದ್ರತಾ ಪಡೆಯ ಸಹಕಾರದೊಂದಿಗೆ ಕಾಂಗ್ರೆಸ್ ನಾಯಕಿ ಕುಸುಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.ಕುಸುಮಾ ಸಹೋದರನ ಜತೆ ಶಾಸಕ ವಿರೇಂದ್ರ ಪಪ್ಪಿ ವ್ಯವಹಾರ ಹೊಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಈ ದಾಳಿಯು ಇತ್ತೀಚೆಗೆ ನಡೆದ ಇ.ಡಿ. ಕಾರ್ಯಾಚರಣೆಗಳ ಮುಂದುವರಿದ ಭಾಗವಾಗಿದೆ. ಇದಕ್ಕೂ ಮೊದಲು, ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಅವರ ಸಹೋದರರ ನಿವಾಸಗಳ ಮೇಲೆಯೂ ಇ.ಡಿ. ದಾಳಿ ನಡೆದಿತ್ತು. ಚಳ್ಳಕೆರೆಯಲ್ಲಿರುವ ಅವರ ನಾಲ್ಕು ಮನೆಗಳು ಮತ್ತು ಬೆಂಗಳೂರಿನ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.ಈ ಸರಣಿ ದಾಳಿಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಮತ್ತಷ್ಟು ಬೆಳವಣಿಗೆಗಳನ್ನು ನಿರೀಕ್ಷಿಸಲಾಗಿದೆ.
ಜಿಎಸ್‌ಟಿ ಸುಧಾರಣೆ: ಮಧ್ಯಮ ವರ್ಗದ ಜೇಬಿಗೆ ಸಿಹಿ, ಇನ್ಮುಂದೆ ಈ ವಸ್ತುಗಳು ಅಗ್ಗ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


