ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಸಂಚಾರಿ ಪೀಠದಿಂದ ಆದೇಶ ನೀಡಲಾಗಿದೆ. ಉಡುಪಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು.
ಹಿರಿಯಡ್ಕ ಸಬ್ ಜೈಲಿಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಡಲಾಗುತ್ತದೆ. ನ್ಯಾಯಾಲಯವು ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಸೋಮವಾರ (ಆಗಸ್ಟ್ 23) ಮತ್ತೆ ವಿಚಾರಣೆ ನಡೆಯಲಿದ್ದು, ಅಂದು ವಾದ ಪ್ರತಿವಾದಗಳ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುತ್ತದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


