ಪುಟ್ಟ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿ ಮಗುವನ್ನೇ ಬಲಿ ತೆಗೆದುಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ 4 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಕಳೆದ ನಾಲ್ಕು ತಿಂಗಳ ಹಿಂದೆ ದಾವಣಗೆರೆ ನಗರದ ಶಾಸ್ತ್ರಿ ಲೇಔಟ್ ನ ಮೊಹಮ್ಮದ್ ಶಾಕೀರ್ ಆಲಿ, ಅತೀಹಾ ಖಾನಂ ದಂಪತಿಯ ಪುತ್ರಿ ಖದೀರಾ ಬಾನುಗೆ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿಯಲ್ಲಿ ಓಡಾಡುತ್ತಿದ್ದ ನಾಯಿಯೊಂದು ಮನೆಯ ಒಳಗಡೆ ನುಗ್ಗಿ ಏಕಾಏಕಿ ಬಂದು ದಾಳಿ ಮಾಡಿತ್ತು.
ತಕ್ಷಣಕ್ಕೆ ಮಗುವಿಗೆ ದಾವಣಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅದಾಗಲೇ ಬಾಲಕಿಗೆ ಇನ್ ಫೆಕ್ಶನ್ ಆಗಿ ರೇಬಿಸ್ ಖಾಯಿಲೆ ತಗುಲಿದೆ.ಈ ಕಾರಣಕ್ಕೆ ಆ ಮಗುವನ್ನ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಕಳೆದ ನಾಲ್ಕು ತಿಂಗಳಿನಿಂದ ಚಿಕಿತ್ಸೆ ಕೊಡಿಸುತ್ತಿದ್ದರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ಬಾಲಕಿ ಮೃತ ಪಟ್ಟಿದ್ದಾಳೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


