Saturday, September 19, 2026
spot_img
More
    spot_img
    HomeLatest newsನಾನು ಹುಟ್ಟಿನಿಂದಲೂ ಕಾಂಗ್ರೆಸ್ಸಿಗ ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ ಎಂದ ಡಿಕೆಶಿ

    ನಾನು ಹುಟ್ಟಿನಿಂದಲೂ ಕಾಂಗ್ರೆಸ್ಸಿಗ ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ ಎಂದ ಡಿಕೆಶಿ

    ಬೆಂಗಳೂರು: ನಾನು ಅಪ್ಪಟ ಕಾಂಗ್ರೆಸ್ಸಿಗ, ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ಕಾಗಿ ಹೇಳಿದ್ದಾರೆ.

    Advertisement

    ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಅವರು ಇಂದು ಪ್ರತಿಕ್ರಿಯೆ ನೀಡಿದರು.

    ವಿಧಾನಸಭೆಯಲ್ಲಿ ಆರ್‍ಎಸ್‍ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್‍ಎಸ್‍ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ ಎಂದರು.

    ಆರ್‍ಎಸ್‍ಎಸ್ ನಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಹಣ ಹೂಡಿಕೆ:
    ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್‍ಎಸ್‍ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‍ಎಸ್‍ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದರು.

    ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್‍ಎಸ್‍ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ ಎಂದರು.

    ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು. ಅದೇ ರೀತಿ ನಾವು ಮಾಡಿದ್ದೇವೆ ಎಂದು ಹೇಳಿದರು.

    ನಿಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ? ಎಂದು ಡಿಸಿಎಂ ಅವರು ಉದಾಹರಣೆ ಕೊಟ್ಟರು.

    ಬಿಜೆಪಿ ಠುಸ್ ಗಿರಾಕಿ:
    ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ ಕೆಲಸ ನಿರ್ವಹಿಸುತ್ತಿದೆ ಎಂದರು.

    ಧರ್ಮಸ್ಥಳದ ತನಿಖೆಗೆ ಸಿದ್ದರಾಮಯ್ಯನೇ ಮಾಸ್ಟರ್‌ಮೈಂಡ್;‌ ತಮ್ಮ ಮನೆಯಲ್ಲೇ ಕಮ್ಯೂನಿಸ್ಟ್‌ಗಳ ಜತೆ ಸಭೆ ನಡೆಸಿದ್ರು ಎಂದ ಅಶೋಕ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading