ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ನಡೆದ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದರು.
ಕರ್ನಾಟಕ ವಿಧಾನಸಭೆಯಲ್ಲಿ ಗುರುವಾರ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಸಂಬಂಧ ಚರ್ಚೆ ನಡೆಯುತ್ತಿರುವಾಗ ಡಿಸಿಎಂ ಡಿಕೆ ಶಿವಕುಮಾರ್ ಆರ್ಎಸ್ಎಸ್ನ ‘ನಮಸ್ತೇ ಸದಾ ವತ್ಸಲೇ’ ಗೀತೆ ಹಾಡಿದರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಕಮ್ಯುನಿಸ್ಟ್ ಪಕ್ಷ, ಜನತಾ ದಳ ಮತ್ತು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ. ಪ್ರತಿಯೊಂದು ಪಕ್ಷದಲ್ಲೂ, ಸಂಘಟನೆಯಲ್ಲೂ ಒಳ್ಳೆಯ ಮತ್ತು ಕೆಟ್ಟ ಗುಣಗಳಿರುತ್ತವೆ ಎಂದು ಹೇಳಿದ್ದಾರೆ. ಒಳ್ಳೆಯದನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಾವು ಬಿಜೆಪಿ, ಆರ್ ಎಸ್ ಎಸ್ ಜೊತೆ ಭಿನ್ನಾಭಿಪ್ರಾಯ ಹೊಂದಿರಬಹುದು. ಆರ್ ಎಸ್ ಎಸ್ ಪ್ರಾರ್ಥನೆ ಹೇಳಿದ ತಕ್ಷಣ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತೇನೆ ಎಂದರ್ಥವಲ್ಲ. ನಾನು ಕಾಂಗ್ರೆಸ್ ನ್ನು ಮುನ್ನಡೆಸಿಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


