Wednesday, November 4, 2026
spot_img
More
    spot_img
    HomeLatest newsಮಕ್ಕಳ ಶಿಕ್ಷಣದ ಹಣದಲ್ಲೂ ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ; ರೇವಣ್ಣ ಆಕ್ರೋಶ

    ಮಕ್ಕಳ ಶಿಕ್ಷಣದ ಹಣದಲ್ಲೂ ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ; ರೇವಣ್ಣ ಆಕ್ರೋಶ

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಹೊಡೆಯುವ ದುಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್‌ನ ಹಿರಿಯ ಶಾಸಕ ಎಚ್.ಡಿ .ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರಿ ಶಾಲೆಗಳ ಸ್ಥಿತಿಗತಿ ಹಾಗೂ ಸುಧಾರಣಾ ವ್ಯವಸ್ಥೆಗಳ ಬಗ್ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಹೆಚ್.ಡಿ. ರೇವಣ್ಣ, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಆದ್ಯತಾವಲಯಗಳ ಮೇಲೆ ನಿಗಾ ವಹಿಸಬೇಕು ಎಂದರು.

    ದೇಶದಲ್ಲಿ ಯಾವ ಕ್ಷೇತ್ರದಲ್ಲೂ ಏಳು ಪ್ರಥಮ ದರ್ಜೆ ಕಾಲೇಜುಗಳಿಲ್ಲ. ತಮ ಹೊಳೆನರಸಿಪುರದಲ್ಲಿ ಮಾತ್ರ ಅಂತಹ ವ್ಯವಸ್ಥೆ ಇದೆ. ಎರಡು ಕೋಟಿ ರೂ. ಖರ್ಚು ಮಾಡಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದೇನೆ. ನಾವು ಖಾಸಗಿ ಶಿಕ್ಷಣ ಸಂಸ್ಥೆ ನಡೆಸುತ್ತಿಲ್ಲ. ಬಡವರ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ವ್ಯವಸ್ಥೆಯನ್ನು ಉತ್ತಮ ಪಡಿಸುತ್ತಿದ್ದೇವೆ ಎಂದು ಹೇಳಿದರು.

    ರಾಜ್ಯದಲ್ಲಿ ನಾಲ್ಕು ಸಾವಿರ ಪ್ರಾಥಮಿಕ ಶಾಲೆಗಳು ಮುಚ್ಚುವ ಹಂತದಲ್ಲಿವೆ. ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಅಜಯ್ ನಾಗಭೂಷಣ್ ಅವರು ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಒಮೆ ನೋಡಿದರೆ ಶಿಕ್ಷಣ ಇಲಾಖೆಯಲ್ಲೂ ಯಾವ ಮಟ್ಟಿನ ಲೂಟಿ ನಡೆಯುತ್ತಿದೆ ಎಂದು ಗೊತ್ತಾಗುತ್ತದೆ. ಶಾಲಾ ಕಟ್ಟಡಗಳ ನಿರ್ಮಾಣವನ್ನು ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಂದ ನಿರ್ವಹಿಸಿದರೆ ಹಣ ಉಳಿತಾಯವಾಗುತ್ತದೆ. ಆದರೆ ಭ್ರಷ್ಟಾಚಾರಕ್ಕಾಗಿ ಬೇರೆ ವ್ಯವಸ್ಥೆಯ ಮೂಲಕ ನಿರ್ಮಾಣ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ದೂರಿದರು.

    ಸರ್ಕಾರಿ ಶಾಲೆಗಳ ಕಾಮಗಾರಿಗಳನ್ನು ನಿರ್ವಹಣೆ ಮಾಡಲಾಗದಿದ್ದ ಮೇಲೆ ಲೋಕೋಪಯೋಗಿ ಮತ್ತು ವಸತಿ ನಿಗಮಗಳನ್ನು ಇಟ್ಟುಕೊಂಡಿರುವುದಾದರೂ ಏಕೆ? ಅವುಗಳನ್ನು ಮುಚ್ಚಿ ಹಾಕಿ ಎಂದು ರೇವಣ್ಣ ಆಕೋಶ ವ್ಯಕ್ತಪಡಿಸಿದರು.

    ಇದೇ ವ್ಯವಸ್ಥೆಯನ್ನು ಮುಂದುವರಿಸಿದರೆ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಖಾಸಗಿ ವಲಯದ ಆಧಿಪತ್ಯಕ್ಕೊಳಪಡುತ್ತದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು.

    ಧರ್ಮಸ್ಥಳ: ಎಸ್‌ಐಟಿ ತನಿಖೆಯಲ್ಲಿ ಸತ್ಯ ಆಚೆ ಬರಲಿದೆ ಎಂದ ನಟಿ ರಮ್ಯಾ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search