Saturday, September 19, 2026
spot_img
More
    spot_img
    HomeLatest newsಬೂಕರ್‌ ವಿಜೇತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ; ಸಿಎಂ ಅಧಿಕೃತ ಘೋಷಣೆ

    ಬೂಕರ್‌ ವಿಜೇತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ; ಸಿಎಂ ಅಧಿಕೃತ ಘೋಷಣೆ

    ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

    Advertisement

    ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಈ ಬಾರಿ ಮೈಸೂರು ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ಕನ್ನಡಕ್ಕೆ ಬೂಕರ್‌ ತಂದುಕೊಟ್ಟ ಮೊದಲ ಸಾಹಿತಿ ಬಾನು ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಸಿರಿಗನ್ನಡದ ಸಾಹಿತ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ.

    ಇನ್ನು ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹೀಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ದಕ್ಕಿವೆ. ಕುಬ, ಬಡವರ ಮಗಳು ಹೆಣ್ಣಲ್ಲ ಕಾದಂಬರಿ, ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ ಅವರು ಬರೆದ ಕಥಾಸಂಕಲನವಾಗಿದೆ.

    ಧರ್ಮಸ್ಥಳ: ಎಸ್‌ಐಟಿ ತನಿಖೆಯಲ್ಲಿ ಸತ್ಯ ಆಚೆ ಬರಲಿದೆ ಎಂದ ನಟಿ ರಮ್ಯಾ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading