Tuesday, August 4, 2026
spot_img
More
    spot_img
    HomeBreaking Newsಏಷ್ಯಾ ಕಪ್: ಪಾಕಿಸ್ತಾನದ ಮೇಲೆ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ಏಷ್ಯಾ ಕಪ್: ಪಾಕಿಸ್ತಾನದ ಮೇಲೆ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

    ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ 14ನೇ ಪಂದ್ಯದಲ್ಲಿ ಭಾರತ ತಂಡ ಬದ್ಧವೈರಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಆಯ್ದುಕೊಂಡರು.

    Advertisement

    ಪಾಕಿಸ್ತಾನದ ಬ್ಯಾಟಿಂಗ್ ಆರಂಭಿಸಿ, ಆರಂಭಿಕ ಬ್ಯಾಟರ್ ಸಾಹಿಬ್‌ಝಾದ ಫರ್ಹಾನ್ 45 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 58 ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಸೈಮ್ ಅಯ್ಯೂಬ್ 21 ರನ್ ಹಾಗೂ ಅಂತಿಮವಾಗಿ ಫಹೀಮ್ ಅಶ್ರಫ್ 20 ರನ್ ಗಳಿಸಿ ಪಾಕಿಸ್ತಾನ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತು.

    172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಶುಭ್ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ಒದಗಿಸಿದರು. ಇಬ್ಬರೂ ಬ್ಯಾಟರ್‌ಗಳು ಪಾಕಿಸ್ತಾನದ ಬೌಲರ್‌ಗಳನ್ನು ಕಂಗಾಲಾಗಿಸಿದರು. ಅದರಲ್ಲೂ ವಿಶೇಷವಾಗಿ, ಅಭಿಷೇಕ್ ಶರ್ಮಾ ಮೊದಲ ಓವರ್‌ನಲ್ಲೇ ಸಿಕ್ಸರ್ ಸಿಡಿಸಿ ಶುಭಾರಂಭ ಮಾಡಿದರು.

    ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಅಬ್ಬರಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಶುಭ್ಮನ್ ಗಿಲ್ ಕೂಡ 28 ಎಸೆತಗಳಲ್ಲಿ 47 ರನ್ ಗಳಿಸಿ ಮಿಂಚಿದರು. ಈ ಆರಂಭಿಕರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಕೇವಲ 10 ಓವರ್‌ಗಳಲ್ಲಿ 109 ರನ್ ಗಳಿಸಿತು.

    ಶುಭ್ಮನ್ ಗಿಲ್ (47) ಔಟಾದ ನಂತರ, ನಾಯಕ ಸೂರ್ಯಕುಮಾರ್ ಯಾದವ್ (0) ಸೊನ್ನೆಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಆದರೆ, ಬಿರುಸಿನ ಬ್ಯಾಟಿಂಗ್ ಮುಂದುವರಿಸಿದ ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ 74 ರನ್ ಗಳಿಸಿ ನಿರ್ಣಾಯಕ ಪಾತ್ರ ವಹಿಸಿದರು.

    ನಂತರ ಬಂದ ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು 18.5 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.



    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading