Thursday, September 3, 2026
spot_img
More
    spot_img
    HomeLatest newsತಿರುಪತಿ ಹುಂಡಿಯಿಂದ 100 ಕೋಟಿಗೂ ಅಧಿಕ ಹಣ ಕಳ್ಳತನ; ಗಂಭೀರ ಆರೋಪ ಮಾಡಿದ ಬಿಜೆಪಿ ಮುಖಂಡ

    ತಿರುಪತಿ ಹುಂಡಿಯಿಂದ 100 ಕೋಟಿಗೂ ಅಧಿಕ ಹಣ ಕಳ್ಳತನ; ಗಂಭೀರ ಆರೋಪ ಮಾಡಿದ ಬಿಜೆಪಿ ಮುಖಂಡ

    ತಿರುಪತಿ: ಮಾಜಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‍ಆರ್‌ಪಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ (ಹುಂಡಿಯಲ್ಲಿ ಭಕ್ತರು ಹಾಕಿದ್ದ) 100 ಕೋಟಿಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

    Advertisement

    ತಿರುಮಲ ತಿರುಪತಿ ದೇವಸ್ತಾನಂ(ಟಿಟಿಡಿ) ಸದಸ್ಯರೂ ಆಗಿರುವ ಬಜೆಪಿ ಮುಖಂಡ ಭಾನುಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಕೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

    ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‍ಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್‍ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್‍ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

    2019ರಿಂದ 2024ರವರೆಗೆ ವೈಎಸ್‍ಆರ್ಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ 100 ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

    ಬಿಜೆಪಿ ನೇತೃತ್ವದ ಎನ್‍ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಲೂಟಿ ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್‍ಆರ್ಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

    ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ಮತ್ತು ಮುಚ್ಚಿದ ಕವರ್ ವರದಿಯನ್ನು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

    ಜಾತಿ ಗಣತಿ 2025: ನಿಮ್ಮ ಬಗ್ಗೆ ಸರ್ಕಾರ ಕೇಳುವ 60 ಪ್ರಶ್ನೆಗಳು, ದಾಖಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading