ಪೇಶಾವರ: ಉಗ್ರರು ಮೂರು ವ್ಯಾನ್‌ಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ವಾಯುವ್ಯ ಪಾಕಿಸ್ತಾನದಲ್ಲಿ ನಡೆದಿದೆ.
ಆಪ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯಲ್ಲಿ ಉಗ್ರರು ವಾಹನಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ಪರಿಣಾಮ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ವಾಹನಗಳು ಪರಾಚಿನಾರ್‌ನಿಂದ ಖೈಬರ್ ಪಖ್ತುಂಖ್ವಾನ ರಾಜಧಾನಿ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಘಟನೆ ಬಗ್ಗೆ ವಿವರ ನೀಡಿದ್ದಾರೆ.
ದಾಳಿಯಲ್ಲಿ ಆರು ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 50 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 10 ಮಂದಿ ದಾಳಿಕೋರರು ರಸ್ತೆಯ ಎರಡೂ ಬದಿಗಳಿಂದ ಮನಬಂದಂತೆ ವಾಹನಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


