ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿಕಿತ್ಸೆ ಮುಗಿದ ನಂತರ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆಗಾಗಿ ಜೈಲಿನಿಂದ ಹೊರಬಂದಿರುವ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಶುರುವಾಗಿದೆ.
ದರ್ಶನ್‌ಗೆ ಮತ್ತೆ ಜಾಮೀನು ನೀಡಬಾರದೆಂದು ಹಲವು ಕಡೆ ಒತ್ತಾಯ ಕೇಳಿಬಂದಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ಆದರೆ ನಾವು ದರ್ಶನ್‌ಗೆ ಜಾಮೀನು ಕೊಡಬಾರದೆಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕುತ್ತೇವೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾದ ನಂತರ ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಸಿಎಂ ಯಾವ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ. ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ. ಸಂಪುಟ ಪುನಾರಚನೆ ಸಿಎಂ ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


