ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಆದರೆ ಅವರು ಜಾಮೀನು ಪಡೆದು ಹೊರ ಬಂದಿದ್ದಾಗ ‘ಡೆವಿಲ್’ ಚಿತ್ರದ ಚಿತ್ತೀಕರಣ ಮುಗಿಸಿದ್ದಾರೆ, ಚಿತ್ರ ಬಿಡುಗಡೆ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಲಾಗಿತ್ತು.
ಆದರೆ ಈಗ ‘ಡೆವಿಲ್’ ಚಿತ್ರದ ಬಿಡುಗಡೆ ದಿನಾಂಕ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಡಿಸೆಂಬರ್ 12, 2025ಕ್ಕೆ ‘ಡೆವಿಲ್’ ಬಿಡುಗಡೆ ಎಂದು ಘೋಷಣೆ ಮಾಡಲಾಗಿತ್ತು. ಈಗ ಒಂದು ದಿನ ಮೊದಲು ಅಂದರೆ ಡಿಸೆಂಬರ್ 11ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.
ಶನಿವಾರ ದರ್ಶನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಒಂದು ಪೋಸ್ಟ್ ಹಾಕಲಾಗಿದ್ದು, ‘#TheDevil arrives early for my beloved celebrities on 11.12.2025’ ಎಂದು ಪೋಸ್ಟ್ ಹಾಕಲಾಗಿದೆ. #12Alla11 ಎಂದು ಹ್ಯಾಷ್ ಟ್ಯಾಗ್ ಬಳಕೆ ಮಾಡಿದ್ದಾರೆ.
ಯಾವ ಕಾರಣಕ್ಕೆ ‘ಡೆವಿಲ್’ ಬಿಡುಗಡೆ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿಲ್ಲ. ಸಾಮಾನ್ಯವಾಗಿ ಕನ್ನಡ ಸಿನಿಮಾಗಳ ಶುಕ್ರವಾರ ಬಿಡುಗಡೆ ಆಗುತ್ತದೆ. ಆದರೆ ಡಿಸೆಂಬರ್ 11ರ ಗುರುವಾರ ‘ಡೆವಿಲ್’ ಬಿಡುಗಡೆ ಮಾಡಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕರ್ನಾಟಕ ಹೈಕೋರ್ಟನಿಂದ ಜಾಮೀನು ಪಡೆದಿದ್ದರು. ಆದರೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ದು, ಆಗಸ್ಟ್‌ನಲ್ಲಿ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ಇದ್ದಾರೆ.
ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ಆರೋಪ ನಿಗದಿ ಮಾಡಿದೆ. ಅಲ್ಲದೇ, ಪ್ರಕರಣದ ವಿಚಾರಣೆಯನ್ನು ಆರಂಭಿಸಿದೆ.
ದರ್ಶನ್ ಅನುಪಸ್ಥಿತಿಯಲ್ಲಿಯೇ ಸಿನಿಮಾ ಬಿಡುಗಡೆಗೆ ‘ಡೆವಿಲ್’ ಚಿತ್ರತಂಡ ಸಜ್ಜಾಗಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನೂ ಡಿಸೆಂಬರ್ 12 ಎಂದು ಘೋಷಿಸಲಾಗಿತ್ತು. ಆದರೆ ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ಡಿಸೆಂಬರ್ 11 ಎಂದು ಬದಲಾಯಿಸಲಾಗಿದೆ.
ಕೆಲವು ದಿನಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್, ಡೆವಿಲ್ ಚಿತ್ರದ ನಿರ್ದೇಶಕ, ನಿರ್ಮಾಪಕ, ದರ್ಶನ್ ಅಭಿಮಾನಿಗಳ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಸಿನಿಮಾ ಬಿಡುಗಡೆ ಹೊಸ ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಈ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದಾಗ ಅವರ ನಟನೆಯ ‘ಸಾರಥಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ದರ್ಶನ್ ಮತ್ತೆ ಜೈಲಿನಲ್ಲಿರುವಾಗ ‘ಡೆವಿಲ್’ ಸಿನಿಮಾ ಬಿಡುಗಡೆ ಆಗುತ್ತಿದೆ. ದರ್ಶನ್ ಸೆಲೆಬ್ರಿಟಿಗಳು ಎಂದು ಕರೆಯುವ ಅಭಿಮಾನಿಗಳು ಸಿನಿಮಾವನ್ನು ಹೇಗೆ ಸ್ವೀಕಾರ ಮಾಡಲಿದ್ದಾರೆ? ಎಂದು ಕಾದು ನೋಡಬೇಕಿದೆ.
‘ಡೆವಿಲ್’ ಚಿತ್ರದ ನಿರ್ದೇಶಕರು ಮಿಲನ ಪ್ರಕಾಶ್. ಚಿತ್ರಕ್ಕೆ ರಚನಾ ರೈ ನಾಯಕಿ. ಅಚ್ಯುತ್ ಕುಮಾರ್, ಮರಾಠಿ ನಟ ಮಹೇಶ್ ಮಂಜ್ರೇಕರ್, ಶರ್ಮಿಳಾ ಮಾಂಡ್ರೆ, ಮಾಜಿ ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡ ಸೇರಿದಂತೆ ಅನೇಕ ನಟರು ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


