Tuesday, August 4, 2026
spot_img
More
    spot_img
    HomeStateDistrictಆಗಸ್ಟ್‌, ಜನವರಿ ಅಲ್ಲ: ಬೆಂಗಳೂರಲ್ಲಿ ನವೆಂಬರ್‌ನಲ್ಲಿ ಫ್ಲವರ್ ಶೋ. ದಿನಾಂಕ, ಪ್ರವೇಶ ಶುಲ್ಕ ಮಾಹಿತಿ

    ಆಗಸ್ಟ್‌, ಜನವರಿ ಅಲ್ಲ: ಬೆಂಗಳೂರಲ್ಲಿ ನವೆಂಬರ್‌ನಲ್ಲಿ ಫ್ಲವರ್ ಶೋ. ದಿನಾಂಕ, ಪ್ರವೇಶ ಶುಲ್ಕ ಮಾಹಿತಿ

    ಬೆಂಗಳೂರು ನಗರದಲ್ಲಿ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮದಲ್ಲಿ ಫಲಪುಷ್ಪ ಪ್ರದರ್ಶನ ಸಹ ಒಂದು. ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ಲಾಲ್‌ಬಾಗ್‌ನಲ್ಲಿ ಆಯೋಜನೆ ಮಾಡುತ್ತದೆ.

    Advertisement

    ಆದರೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ನವೆಂಬರ್ ತಿಂಗಳಿನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಕುರಿತು ದಿನಾಂಕ ಮತ್ತು ಸ್ಥಳವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ.

    ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಮೊದಲ ಬಾರಿಗೆ ಕಬ್ಬನ್ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ನವೆಂಬರ್ 27 ರಿಂದ 11 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ.

    ತೋಟಗಾರಿಕಾ ಇಲಾಖೆಯ ಆಯೋಜನೆ: ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕಾ ಇಲಾಖೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡುತ್ತದೆ. ಆದರೆ ಇಲಾಖೆ ಮೊದಲ ಬಾರಿಗೆ ಕಬ್ಬನ್ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸುತ್ತಿದೆ.

    ನವೆಂಬರ್ 27 ರಿಂದ  ಡಿಸೆಂಬರ್ 7ರ ತನಕ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದ ಮಾದರಿಯಲ್ಲಿಯೇ ಕಬ್ಬನ್ ಪಾರ್ಕ್‌ನಲ್ಲಿ  ಆಯೋಜನೆ ಮಾಡಲಾಗುತ್ತಿದ್ದು, ಇದಕ್ಕಾಗಿಯೇ ಇಲಾಖೆ ಸುಮಾರು 40 ಲಕ್ಷ ರೂ. ಖರ್ಚು ಮಾಡುತ್ತಿದೆ.

    ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತಿದೆ. ಆದ್ದರಿಂದ ಇದಕ್ಕೆ ಹೊಂದಿಕೆಯಾಗುವಂತೆ ಹೂಗಳಲ್ಲಿ ವಿವಿಧ ವಿನ್ಯಾಸವನ್ನು ಮಾಡಲಾಗುತ್ತದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನಗಳು, ಕಾರಂಜಿ, ಬ್ಯಾಂಡ್‌ಸೆಟ್ ಸೇರಿದಂತೆ ಹಲವು ಆಕರ್ಷಣೆಗಳು ಈ ಕಾರ್ಯಕ್ರಮದ ಭಾಗವಾಗಿರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

     ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯ ತನಕ ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡಲು ಜನರಿಗೆ ಅವಕಾಶವನ್ನು ನೀಡಲಾಗುತ್ತದೆ. ಈ ಪ್ರದರ್ಶನಕ್ಕೆ ಸುಮಾರು 2 ಲಕ್ಷ ಜನರು ಆಗಮಿಸಬಹುದು ಎಂದು ಅಂದಾಜಿಸಲಾಗಿದೆ.

    ಫಲಪುಷ್ಪ ಪ್ರದರ್ಶನ ನೋಡಲು ಆಗಮಿಸುವ ವಯಸ್ಕರಿಗೆ 30 ರೂ. ಮತ್ತು ಮಕ್ಕಳಿಗೆ 10 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಶಾಲಾ ಸಮವಸ್ತ್ರ ಧರಿಸಿ, ಐಡಿ ಕಾರ್ಡ್ ಹೊಂದಿರುವ ಮಕ್ಕಳಿಗೆ ಪ್ರವೇಶ ಉಚಿತ. ಈಗಾಗಲೇ  ಕಾರ್ಯಕ್ರಮಕ್ಕೆ ಆಗಮಿಸುವ ಜನರ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡುವಂತೆ ಸಂಚಾರಿ ಪೊಲೀಸರಿಗೆ ಇಲಾಖೆ ಮನವಿ ಸಲ್ಲಿಕೆ ಮಾಡಿದೆ.

    ಈ ಹಿಂದೆಯೋ ತೋಟಗಾರಿಕೆ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿತ್ತು. ಆದರೆ ಇದು ಕೆಲವೇ ದಿನಕ್ಕೆ ಸೀಮಿತವಾಗಿತ್ತು.

    ಕಬ್ಬನ್ ಪಾರ್ಕ್‌ ಫಲಪುಷ್ಪ ಪ್ರದರ್ಶನವನ್ನು 11 ದಿನಗಳ ಕಾಲ ಯಶಸ್ವಿಯಾಗಿ ನಡೆಸಿ, ಮುಂದಿನ ವರ್ಷದಿಂದ ಲಾಲ್‌ಬಾಗ್ ಮಾದರಿಯಲ್ಲಿಯೇ ಕಬ್ಬನ್ ಪಾರ್ಕ್‌ನಲ್ಲಿಯೂ ಪ್ರದರ್ಶನ ನಡೆಸುವ ಚಿಂತನೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 50 ಬಗೆಯ ಸಸ್ಯಗಳು, 50 ಬಗೆಯ ವಿವಿಧ ಮಾದರಿ ಹೂಗಳ ಮೂಲಕ ವಿವಿಧ ಮಾದರಿ ನಿರ್ಮಾಣ ಮಾಡಲಾಗುತ್ತದೆ. ಸುಮಾರು 100 ಮಳಿಗೆಗಳಿಗೆ ಪ್ರದರ್ಶನದಲ್ಲಿ ಅವಕಾಶ ನೀಡಲಾಗುತ್ತದೆ. ಇದರಲ್ಲಿ ನರ್ಸರಿ, ಆಹಾರ, ಕರಕುಶಲ ವಸ್ತುಗಳ ಮಾರಾಟದ ಸ್ಟಾಲ್‌ಗಳು ಸೇರಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading