Friday, October 30, 2026
spot_img
More
    spot_img
    HomeLatest newsಪುರುಷ ಸರ್ಕಾರಿ ನೌಕರರಿಗೂ ಶಿಶುಪಾಲನಾ ರಜೆ, ವಿವರಗಳು

    ಪುರುಷ ಸರ್ಕಾರಿ ನೌಕರರಿಗೂ ಶಿಶುಪಾಲನಾ ರಜೆ, ವಿವರಗಳು

    ಕರ್ನಾಟಕದಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವಿದೆ. ಖಾಸಗಿ ಕಂಪನಿಗಳು ಸಹ ಮಹಿಳಾ ನೌಕರರಿಗೆ ಈ ಮಾದರಿ ವೇತನ ಸಹಿತ ರಜೆಗಳನ್ನು ನೀಡುತ್ತದೆ. ಪುರುಷ ಸರ್ಕಾರಿ ನೌಕರರಿಗೂ ಈ ಮಾದರಿ ರಜೆಗಳಿವೆ. ಈ ಕುರಿತು ಆದೇಶದ ವಿವರಗಳು ಈಗ ಎಲ್ಲಾ ಕಡೆ ಶೇರ್ ಆಗುತ್ತಿದೆ.

    ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಜಯ್ ಎಸ್. ಕೊರಡೆ, ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸೇವೆಗಳು-1) ಹೊರಡಿಸಿದ್ದ ಆದೇಶದ ವಿವರಗಳನ್ನು ಈಗ ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ.

    ಈ ಆದೇಶವು: ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದ್ದು, ಸರ್ಕಾರಿ ಆದೇಶ 21/06/2021 ಉಲ್ಲೇಖ ಮಾಡಲಾಗಿದೆ.

    ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

    ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ ವಿವಾಹ-ವಿಚ್ಚೇದಿತ/ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇರುತ್ತದೆಂದು ತಿಳಿಸಿ ಈ ರಜೆಯ ಸೌಲಭ್ಯವನ್ನು ಅಂತಹ ಪುರುಷ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸಬೇಕೆಂದು ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ.

    ಮೂಲತಃ ಶಿಶುಪಾಲನಾ ರಜೆಯ ಸೌಲಭ್ಯವನ್ನು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಮಾತ್ರ ವಿಸ್ತರಿಸಿದ್ದಾಗ್ಯೂ ಏಕಪೋಷಕರಾಗಿರುವ ಪುರುಷ ಸರ್ಕಾರಿ ನೌಕರರಿಗೂ ಈ ಸೌಲಭ್ಯವನ್ನು ವಿಸ್ತರಿಸುವುದು ನ್ಯಾಯಸಮ್ಮತವಾಗುವುದನ್ನು ಪರಿಗಣಿಸಿ ಸರ್ಕಾರ ಶಿಶುಪಾಲನಾ ರಜೆಯ ಸೌಲಭ್ಯವನ್ನು ಕೆಲವು ಷರತ್ತುಗಳಿಗೊಳಪಟ್ಟು ಒಂಟಿ ಪೋಷಕರಾಗಿರುವ ಅವಿವಾಹಿತ/ ವಿವಾಹ-ವಿಚ್ಚೇದಿತ/ ವಿಧುರ ಸರ್ಕಾರಿ ಪುರುಷ ನೌಕರರಿಗೂ ಸಹ ವಿಸ್ತರಿಸಲು ತೀರ್ಮಾನಿಸಿದೆ.

    ಸರ್ಕಾರದ ಆದೇಶ: ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 9.6.2023. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ, ಸರ್ಕಾರವು ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ ವಿವಾಹ-ವಿಚ್ಛೇದಿತ/ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯ ಸೌಲಭ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿದೆ.

    ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವು ದಿನಾಂಕ 21.06.2021ರ ಸರ್ಕಾರಿ ಆದೇಶದಲ್ಲಿ ವಿಧಿಸಲಾಗಿರುವ ಷರತ್ತುಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆಯನ್ನು ಮಂಜೂರು ಮಾಡತಕ್ಕದ್ದು.

    ಯಾವುದೇ ಸಂದರ್ಭದಲ್ಲಿ ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯು ತಾನಾಗಿಯೇ ರದ್ದುಗೊಳ್ಳುತ್ತದೆ. ಈ ಆದೇಶದ ಉಪಬಂಧಗಳನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯಲ್ಲಿ ಅಳವಡಿಸಲು ಪ್ರತ್ಯೇಕ ತಿದ್ದುಪಡಿಯನ್ನು ತರಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search