ಕಿಚ್ಚ ಸುದೀಪ್ ನಟನೆಯ ಮಾರ್ಕ್ ಇದೇ ಕ್ರಿಸ್‌ಮಸ್ ದಿನದಂದು ಪಂಚಭಾಷೆಯಲ್ಲಿ ತೆರೆಗೆ ಬರಲಿದೆ. ಚಿತ್ರದ ಹಾಡುಗಳು ಹಾಗೂ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿ ಚಿತ್ರಕ್ಕೆ ಬೇಕಾದ ಹೈಪ್ ಹುಟ್ಟಿಸಿದ್ದು, ಮೊನ್ನೆ ಚಿತ್ರ ಬಿಡುಗಡೆಯ ಸಲುವಾಗಿ ಹುಬ್ಬಳ್ಳಿಯಲ್ಲಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮವನ್ನೂ ಸಹ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನಟ ಸುದೀಪ್ ಮಾರ್ಕ್ ಬಿಡುಗಡೆಗೆ ಸಜ್ಜಾಗುತ್ತಿದ್ದರೆ, ಅತ್ತ ಪಡೆಯೊಂದು ಯುದ್ಧಕ್ಕೆ ರೆಡಿಯಾಗುತ್ತಿದೆ, ಯುದ್ಧಕ್ಕೆ ನಾವು ಸಿದ್ಧ ಎಂದಿದ್ದರು. ಇದು ಪರೋಕ್ಷವಾಗಿ ದರ್ಶನ್ ಅಭಿಮಾನಿಗಳಿಗೆ ನೀಡಿದ ಟಾಂಗ್ ಎಂಬುದನ್ನು ಸುಲಭವಾಗಿ ಹೇಳಬಹುದಿತ್ತು.
ಹೀಗೆ ಸುದೀಪ್ ನೀಡಿದ ಹೇಳಿಕೆಗೆ ಕೆರಳಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗಳನ್ನು ವ್ಯಕ್ತಪಡಿಸಿದ್ದು, ಇದರ ಜತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಹ ಸ್ಟಾರ್ ವಾರ್ ಅಖಾಡಕ್ಕೆ ಇಳಿದಿದ್ದಾರೆ.
ಡೆವಿಲ್ ಚಿತ್ರದ ವಿಜಯಯಾತ್ರೆ ವೇಳೆ ವಿಜಯಲಕ್ಷ್ಮಿ ‘ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ. ಟಿವಿ ಸಂದರ್ಶನದಲ್ಲಿ, ಸ್ಟೇಜ್ ಮೇಲೆ ಮಾತಾಡ್ತಾರೆ. ಆದರೆ ದರ್ಶನ್ ಇದ್ದಾಗ ಮಾತ್ರ ಅವರು ಬೆಂಗಳೂರಿನಲ್ಲಿ ಇದ್ದಾರಾ ಇಲ್ವಾ ಅನ್ನೋದೇ ಗೊತ್ತಾಗಲ್ಲ, ಎಲ್ಲಿ ಮಾಯ ಆಗ್ತಾರೆ ಅಂತಾನೇ ಗೊತ್ತಾಗಲ್ಲ. ಟೀಕಿಸುವವರ ಬಗ್ಗೆ ದರ್ಶನ್ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ’ ಎಂದು ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


