ಬಿಜೆಪಿ ಶಾಸಕ ಬೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದಾರೆ. ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ 5ನೇ ಆರೋಪಿಯಾದ ಕೆ.ಆರ್.ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್‌ಗಾಗಿ ಸಿಐಡಿ ಪೊಲೀಸರು ಮೂರು ರಾಜ್ಯಗಳಲ್ಲಿ ಹುಡುಕಾಟವನ್ನು ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕರು ಬಳಿಕ ಎಸ್ಕೇಪ್ ಆಗಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿ ಶಾಸಕ ಬೈರತಿ ಬಸವರಾಜ್‌ಗಾಗಿ ಸಿಐಡಿ ಪೊಲೀಸರು ಹುಡುಕಾಟವನ್ನು ಮುಂದುವರೆಸಿದ್ದಾರೆ.
ಶಾಸಕ ಬೈರತಿ ಬಸವರಾಜ್ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಸಾಧ್ಯವಿಲ್ಲ ಎಂದು ಆದೇಶವನ್ನು ನೀಡಿದೆ.
ಈ ಆದೇಶದ ಬಳಿಕ ಶಾಸಕ ಬೈರತಿ ಬಸವರಾಜ್ ಎಸ್ಕೇಪ್ ಆಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಕಿಕೊಂಡಿದ್ದ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಸಿಐಡಿ ಪೊಲೀಸರು ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ತಯಾರಿ ನಡೆಸಿದ್ದು, ಶಾಸಕರಿಗೆ ಕಾನೂನು ಕುಣಿಗೆ ಬಿಗಿಯಾಗಿದೆ.
ಮೂರು ತಂಡಗಳ ರಚನೆ: ಶಾಸಕ ಬೈರತಿ ಬಸವರಾಜ್ ಬಂಧಿಸಲು ಸಿಐಡಿ ಪೊಲೀಸರ ಮೂರು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಶಾಸಕರ ಮೊಬೈಲ್ ಲೊಕೇಷನ್ ಕೊನೆಯದಾಗಿ ಗೋವಾದಲ್ಲಿ ಪತ್ತೆಯಾಗಿದೆ. ಆದ್ದರಿಂದ ಗೋವಾ, ಮಹಾರಾಷ್ಟ್ರದಲ್ಲಿ ತೀವ್ರವಾಗಿ ಹುಡುಕಾಟವನ್ನು ಮಾಡಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಶಾಸಕ ಬೈರತಿ ಬಸವರಾಜ್ ಅವರ ಆಪ್ತರ ಮೇಲೆ ಪೊಲೀಸರು ನಿಗಾವಹಿಸಿದ್ದಾರೆ. ಶಾಸಕರು ಯಾರನ್ನಾದರೂ ಸಂಪರ್ಕ ಮಾಡಿದರೆ ಆ ಮೂಲಕ ಅವರ ಬಂಧನ ಇನ್ನಷ್ಟು ಸುಲಭವಾಗಲಿದೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದರೆ ಶಾಸಕ ಶಾಸಕ ಬೈರತಿ ಬಸವರಾಜ್ ಬಂಧನ ಭೀತಿಯಿಂದ ಪಾರಾಗಲಿದ್ದಾರೆ. ಜಾಮೀನು ಅರ್ಜಿ ತಿರಸ್ಕಾರವಾದರೆ ಸಿಐಡಿ ಪೊಲೀಸರ ಹುಟುಕಾಟ ಇನ್ನಷ್ಟು ಚುರುಕಾಗಲಿದೆ.
ಒಂದು ವೇಳೆ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರವಾದರೆ ಅವರು ದೇಶ ಬಿಟ್ಟು ಪರಾರಿಯಾಗುವ ನಿರೀಕ್ಷೆಯೂ ಇದೆ. ಆದ್ದರಿಂದ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ತಯಾರಿ ನಡೆಸಿದ್ದಾರೆ.
ಶಾಸಕ ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾದರೆ ಅವರು ದೇಶ ಬಿಟ್ಟು ಹೋಗುವುದು ಕಷ್ಟವಾಗಲಿದೆ. ನೋಟಿಸ್ ಜಾರಿಯಾದ ಹೆಸರಿನಲ್ಲಿರುವ ವ್ಯಕ್ತಿ ಏರ್‌ಪೋರ್ಟ್‌ಗೆ ಬಂದರೆ ಅವರನ್ನು ತಡೆದು ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಲಾಗುತ್ತದೆ. ಆದ್ದರಿಂದ ಎಲ್ಲೇ ಇದ್ದರೂ ಶಾಸಕ ಬೈರತಿ ಬಸವರಾಜ್ ಬಂಧನವಾಗಲಿದೆ.
ಮೊಬೈಲ್ ಲೊಕೇಷನ್ ಆಧರಿಸಿ ಪೊಲೀಸರು ಹುಡುಕಾಟ ನಡೆಸಬಹುದು ಎಂಬ ಕಾರಣಕ್ಕೆ ಶಾಸಕ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಜುಲೈ ತಿಂಗಳಿನಿಂದ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆ ಆರಂಭವಾಗಿದೆ.
ಎಫ್‌ಐಆರ್‌ನಲ್ಲಿ 5ನೇ ಆರೋಪಿಯಾಗಿ ಕೆ.ಆರ್.ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಸೇರಿಸಲಾಗಿದೆ. ಪೊಲೀಸ್ ಠಾಣೆಗೆ ಹೋಗಿ ಈ ಪ್ರಕರಣದ ವಿಚಾರಣೆಯನ್ನು ಸಹ ಅವರು ಎದುರಿಸಿದ್ದರು. ಕೊಲೆ ಹಿಂದೆ ಶಾಸಕರ ಕೈವಾಡ ಇರುವುದು ಖಚಿತವಾಗಿದ್ದು, ಹೆಚ್ಚಿನ ವಿಚಾರಣೆಗೆ ಅವರನ್ನು ಬಂಧಿಸಲು ಸಿಐಡಿ ತಯಾರಿ ನಡೆಸಿದೆ.
ಶಾಸಕ ಬೈರತಿ ಬಸವರಾಜ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 1,39,925 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
2025ರ ಜುಲೈ 15ರಂದು ಬೆಂಗಳೂರು ನಗರದ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ನಡೆದಿತ್ತು. ರೌಡಿಶೀಟರ್ ತಾಯಿ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


