Saturday, August 8, 2026
spot_img
More
    spot_img
    HomeTop Storyಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್‌; ಕಾರಣ ಬಿಚ್ಚಿಟ್ಟ ಕಿಚ್ಚ

    ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್‌; ಕಾರಣ ಬಿಚ್ಚಿಟ್ಟ ಕಿಚ್ಚ

    ರಾಜ್ಯ ಸರ್ಕಾರ ಘೋಷಿಸಿದ್ದ 2019ರ ಅತ್ಯುತ್ತಮ ನಟ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ.

    Advertisement

    ʼಪೈಲ್ವಾನ್‌ʼ ಸಿನಿಮಾದ ನಟನೆಗಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರನ್ನು ಅತುತ್ತಮ ನಟ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿತ್ತು. ಆದರೆ ಈ ಪ್ರಶಸ್ತಿಯನ್ನು ನಿರಾಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ದೀರ್ಘವಾಗಿ ಬರೆದುಕೊಂಡಿದ್ದಾರೆ.

    ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್‌, 2019ನೇ ಕ್ಯಾಲೆಂಡರ್ ವರ್ಷದ ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ನೀಡಿರುವುದಕ್ಕೆ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹಲವು ವರ್ಷಗಳಿಂದ ಪ್ರಶಸ್ತಿ ಸ್ವೀಕರಿಸುವುದನ್ನು ನಾನು ನಿಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿಲ್ಲ. ಅನೇಕ ಅರ್ಹ ನಟರ ನಡುವೆ ಒಬ್ಬರು ಈ ಪ್ರಶಸ್ತಿ ಸ್ವೀಕರಿಸುವುದನ್ನು ನೋಡಲು ಖುಷಿ ಕೊಡುತ್ತದೆ. ನನ್ನ ಗುರಿ ಜನರನ್ನು ರಂಜಿಸುವುದು. ಪ್ರಶಸ್ತಿ ನಿರೀಕ್ಷೆಯಿಲ್ಲದೆಯೇ ಎಂದು ಬರೆದುಕೊಂಡಿದ್ದಾರೆ.

    ನನ್ನನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನನ್ನ ನಿರ್ಧಾರದಿಂದ ಬೇಸರವಾಗಿದೆ ಎಂಬುದು ಗೊತ್ತು. ಆದ ಕಾರಣ ತೀರ್ಪುಗಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಹಾಗೂ ನಾನು ಆಯ್ಕೆ ಮಾಡಿದ ಹಾದಿಯನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬಿದ್ದೇನೆ. ಮತ್ತೊಮ್ಮೆ ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿ ನೀಡಿದ್ದಕ್ಕಾಗಿ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading