Friday, August 7, 2026
spot_img
More
    spot_img
    HomeLatest newsಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದೆ: ಎಂ.ಲಕ್ಷ್ಮಣ್‌

    ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದೆ: ಎಂ.ಲಕ್ಷ್ಮಣ್‌

    ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

    Advertisement

    ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಕೊಡುವ ಅವಶ್ಯಕತೆ ಏನಿತ್ತು? ವಿಚಾರಣೆ ಹಂತದಲ್ಲಿ ಇರುವಾಗಲೇ ಪತ್ರಿಕಾ ಪ್ರಕಟಣೆ ಕೊಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದರು.

    ಸಿಎಂ ಪತ್ನಿ ಪಡೆದ ಸೈಟನ್ನು ಈಗಾಗಲೇ ಮುಡಾಗೆ ವಾಪಸ್‌ ನೀಡಲಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಹೆಸರು ಹೇಳೋದು ಸರಿಯಲ್ಲ ಎಂದು ಕಿಡಿಕಾರಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಇಡಿಗೆ ತಾಕತ್ತಿದ್ದರೆ ಜಪ್ತಿ ಮಾಡಿದ್ದೇವೆ ಎಂದು ಹೇಳುವ 142 ಸೈಟ್‌ ಪಟ್ಟಿ ಬಿಡುಗಡೆ ಮಾಡಲಿ. ಇಡಿ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading