Friday, September 4, 2026
spot_img
More
    spot_img
    HomeTop Storyಮಹಾಕುಂಭಮೇಳ ಅಂತ್ಯಕ್ಕೆ 4 ದಿನ ಬಾಕಿ: ಮಹಾಶಿವರಾತ್ರಿ ಹಿನ್ನೆಲೆ ಪುಣ್ಯಸ್ನಾನಕ್ಕೆ ಆಗಮಿಸುತ್ತಿರುವ ಸಾರ್ವಜನಿಕರು

    ಮಹಾಕುಂಭಮೇಳ ಅಂತ್ಯಕ್ಕೆ 4 ದಿನ ಬಾಕಿ: ಮಹಾಶಿವರಾತ್ರಿ ಹಿನ್ನೆಲೆ ಪುಣ್ಯಸ್ನಾನಕ್ಕೆ ಆಗಮಿಸುತ್ತಿರುವ ಸಾರ್ವಜನಿಕರು

    ಪ್ರಯಾಗ್‌ ರಾಜ್:‌ ಮಹಾಕುಂಭಮೇಳ ಕಡೆಯ ಹಂತದಲ್ಲಿ ತಲುಪುತ್ತಿರುವ ಹಿನ್ನೆಲೆ ಪ್ರಯಾಗ್‌ ರಾಜ್‌ಗೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 70 ಲಕ್ಷಕ್ಕೂ ಅಧಿಕ ಜನರು ಪುಣ್ಯಸ್ನಾನ ಮಾಡಿದ್ದಾರೆ. ಈವರೆಗೂ 60 ಕೋಟಿಗೂ ಜನರು ಅಮೃತಸ್ನಾನ ಮಾಡಿದ್ದಾರೆ ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ.

    Advertisement

    ಮೊರಾದಾಬಾದ್‌ ರೈಲು ನಿಲ್ದಾಣದಲ್ಲಿ ಪ್ರಯಾಗ್‌ರಾಜ್‌ಗೆ ಹೋಗುವ ರೈಲುಗಳಲ್ಲಿ ಸೀಟುಗಳಿಗಾಗಿ ಪೈಪೋಟಿ ನಡೆಯಿತು. ನೌಚಂಡಿ, ಲಿಂಕ್‌, ಸಂಗಮ್‌ ಎಕ್ಸ್‌ಪ್ರೆಸ್‌ ಸೇರಿದಂತೆ ಎಲ್ಲಾ ರೈಲುಗಳು ಜನದಟ್ಟಣೆಯಿಂದ ತುಂಬಿದ್ದವು. ವಿಶೇಷ ರೈಲುಗಳಿಲ್ಲಿಯೂ ಸಹ ಖಾಲಿ ಸೀಟುಗಳು ಇರಲಿಲ್ಲ. ಫೆಬ್ರವರಿ.26ರವರೆಗೆ ಪ್ರಯಾಗ್‌ರಾಜ್‌ಗೆ ಹೆಚ್ಚಿನ ವಿಶೇಷ ರೈಲುಗಳನ್ನು ಇಲಾಖೆ ಓಡಿಸಬಹುದು.

    ಮಹಾಕುಂಭದ ಸಮಯದಲ್ಲಿ ಅಪಾರ ಸಂಖ್ಯೆಯ ಸಾರ್ವಜನಿಕರು ರೈಲು ನಿಲ್ದಾಣಗಳು ಮತ್ತು ರಸ್ತೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಪ್ರಯಾಗ್‌ರಾಜ್‌ ವಿಮಾನ ನಿಲ್ದಾನದ ಮೂಲಕವು ಪ್ರಯಾಣಿಸುತ್ತಿದ್ದಾರೆ. ಇಲ್ಲಿಯವರೆಗೆ ಮಹಾಕುಂಭಮೇಳದಲ್ಲಿ 3.32 ಲಕ್ಷ ಪ್ರಯಾಣಿಕರು ವಿಮಾನ ಪ್ರಯಾಣದ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

    ಇನ್ನು ಮಹಾಶಿವರಾತ್ರಿ ಉತ್ಸವವನ್ನು ಸುಗಮವಾಗಿ ನಡೆಸಲು ಪೊಲೀಸ್‌ ಆಡಳಿತ ಸಜ್ಜಾಗಿದೆ. ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಜಿಲ್ಲೆಗೆ ಪ್ರವೇಶಿಸುವ ಏಳು ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಏಳು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಈ ಮಾರ್ಗಗಳಲ್ಲಿ ನಿಯೋಜಿಸಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading