Wednesday, November 4, 2026
spot_img
More
    spot_img
    HomeTop Storyಇವತ್ತು ಚುನಾವಣೆ ನಡೆದರೆ ಕಾಂಗ್ರೆಸ್‌ ಕೇವಲ 20 ಸೀಟು ಗೆಲ್ಲುತ್ತೆ: ಗೋವಿಂದ ಜಾರಕೋಳ

    ಇವತ್ತು ಚುನಾವಣೆ ನಡೆದರೆ ಕಾಂಗ್ರೆಸ್‌ ಕೇವಲ 20 ಸೀಟು ಗೆಲ್ಲುತ್ತೆ: ಗೋವಿಂದ ಜಾರಕೋಳ

    ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡುತ್ತಿಲ್ಲ. ಗೃಹಲಕ್ಷ್ಮೀ ಹಣ ಮೂರು ತಿಂಗಳಿನಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಸಿಎಂ ಮಾಡಲು ಅವಕಾಶ ಇದೆ. ಖರ್ಗೆ ಅವರು ಯಾರನ್ನಾದರೂ ಮಾಡಲಿ. ದಲಿತ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಪರಮೇಶ್ವರ್‌, ಮುನಿಯಪ್ಪ ಅವರನ್ನು ಮಾಡಬೇಕು. ಇಲ್ಲವಾದರೆ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದು ಅಭಿಪ್ರಾಯಪಟ್ಟರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search