ಮಂಗಳೂರು: ಓರ್ವ ಶಾಸಕ ಹಾಗೂ ಸಚಿವನಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅನ್ನು ಭೇಟಿ ಮಾಡದೇ, ಕೇಶವ ಕೃಪಾ,ಮೋದಿ, ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಬೇಕಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಡಿಕೆಶಿ ಹೈಕಮಾಂಡ್ ಮೀಟಿಂಗ್ ಬಗ್ಗೆ ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೋಗಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕು. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಇನ್ನು ಹಣವಿಲ್ಲದ ರಾಜ್ಯ ಸರ್ಕಾರ ಬಜೆಟ್ ಹೇಗೆ ಮಂಡನೆ ಮಾಡುತ್ತದೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಕೆಲಸವಿಲ್ಲ. ಕೇಂದ್ರ ಸರ್ಕಾರದ ಪುರಸ್ಕೃತ ಕಾರ್ಯಕ್ರಮಗಳಿಗೆ ಎಷ್ಟು ಹಣ ಕೊಟ್ಟಿದ್ದಾರೆಂದು ಉತ್ತರಿಸಲಿ. ಅವರ ಹಣ ನಾನೇ ಕೊಡುತ್ತೇವೆ. ಜಲಜೀವನ್ ಮಿಷನ್ಗೆ ಕೇಂದ್ರ ಕೊಡಬೇಕಿದ್ದ ಹಣದಲ್ಲಿ ನಮಗೆ ಬಂದ ಹಣವೆಷ್ಟು ಎಂದು ಪ್ರಶ್ನೆ ಮಾಡಿದರು.
ಇನ್ನು ಗೃಹಲಕ್ಷ್ಮೀ ಯೋಜನೆ ಹಣ ಬರುವುದು ವಿಳಂಬ ಆಗಿರೋದು ನಿಜ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ಅವರು ಈ ವಾರದಲ್ಲಿ ಹಣ ಎಲ್ಲರ ಖಾತೆಗೆ ಬೀಳುತ್ತದೆ ಎಂದು ಹೇಳಿದ್ದಾರೆ. ಬಿಟ್ಟಿ ಭಾಗ್ಯ ಸರಿಯಿಲ್ಲ ಎಂದ ಬಿಜೆಪಿಯವರು ಯಾಕೆ ಇದರ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


