Saturday, November 7, 2026
spot_img
More
    spot_img
    HomeStateDistrictಬಳ್ಳಾರಿ: ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; Ballari

    ಬಳ್ಳಾರಿ: ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; Ballari

    ಬಳ್ಳಾರಿ: ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ( ballari ) ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ಹೇಳಿದರು.

    ಈ ಬಾರಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನುಡಿಹಬ್ಬ, ಕನ್ನಡದ ಜಾತ್ರೆ ಇದ್ದಂತೆ. 68 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕನ್ನಡ ಸಾಹಿತ್ಯಕಾರರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಮಾಧ್ಯಮದವರ ಪರಸ್ಪರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಿದೆ ಎಂದರು.

    ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸಲು ಸೂಕ್ತ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಳ್ಳಬೇಕು. ಇದರಲ್ಲಿ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಭಾಗದಲ್ಲಿ ನಡೆಯುತ್ತಿರುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಹಾಗಾಗಿ ಇಲ್ಲಿ ನಡೆಯುವುದರಿಂದ ಕನ್ನಡದ ಅಸ್ಮಿತೆಯು ಗಡಿಭಾಗದ ಎಲ್ಲೆ ಮೀರಿ ಹರಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    India vs England: ಪ್ರಥಮ ಇನ್ನಿಂಗ್ಸ್‌ ಮೊದಲ ಇನ್ನಿಂಗ್ಸ್‌ ಮುಕ್ತಾಯ; ಮೇಲುಗೈ ಯಾರದ್ದು?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search