ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (siddaramaiah) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.
ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.
ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್‌ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.
ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಸಚಿವ ಎಚ್.ಕೆ.ಪಾಟೀಲ್ ಪತ್ರ ಬರೆದು ವಿಶೇಷ ನ್ಯಾಯಾಲಯ ಸ್ಥಾಪಿಸಿ ಬೊಕ್ಕಸಕ್ಕಾಗಿರುವ ನಷ್ಟವನ್ನು ವಸೂಲಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ವಿಷಯ ಚರ್ಚೆ ನಡೆಸುವಂತೆ ಸಲಹೆ ನೀಡಿದ್ದಾರೆ ಎಂದರು.
ಈ ಹಿಂದೆ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಅಕ್ರಮ ಗಣಿಗಾರಿಕೆಯ ಬಗ್ಗೆ ವರದಿ ನೀಡಿದ್ದರು. ಅದನ್ನು ನಾನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಸರಿಯಾದ ಉತ್ತರ ಸಿಗಲಿಲ್ಲ. ಚರ್ಚೆಯ ವೇಳೆ ಬಿಜೆಪಿಯ ಶ್ರೀರಾಮಲು, ಜನಾರ್ಧನರೆಡ್ಡಿ ಮತ್ತಿತರರು ನೀವು ಬಳ್ಳಾರಿಗೆ ಬನ್ನಿ, ನೋಡಿಕೊಳ್ಳುತ್ತೇವೆ ಎಂದು ಸವಾಲು ಹಾಕಿದ್ದರು. ಅದನ್ನು ಸ್ವೀಕರಿಸಿದ ನಾನು ನಡೆದುಕೊಂಡೇ ಬಳ್ಳಾರಿಗೆ ಬರುತ್ತೇನೆ ಎಂದು ಹೇಳಿ ಪಾದಯಾತ್ರೆ ನಡೆಸಿದ್ದಾಗಿ ಸಿದ್ದರಾಮಯ್ಯ ತಿಳಿಸಿದರು.
ಕೃಷಿ ಎಐ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
ಧರ್ಮಸ್ಥಳ: ಅತ್ಯಾಚಾರ, ಕೊಲೆಯಾದ ಮೃತದೇಹಗಳನ್ನು ಹೊರತೆಗೆದು ಶರಣಾಗುತ್ತೇನೆ ಎಂದ ವ್ಯಕ್ತಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


