ಬೆಂಗಳೂರು: ಧರ್ಮಸ್ಥಳ ಸರಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಇಂದಿನಿಂದ ( ಜುಲೈ 23 ) ತನಿಖೆ ಪ್ರಕ್ರಿಯೆಗಳು ಆರಂಭಗೊಂಡಿದೆ.
ಈ ಹಿಂದೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಗ ನಡೆದ ಕೊಲೆಗಳ ಹೆಣಗಳನ್ನು ತಾನು ಹೂತಿದ್ದು ಅವುಗಳ ಅಸ್ತಿಪಂಜರವನ್ನು ತೋರಿಸುವುದಾಗಿ ಹೇಳಿದ್ದು, ಇದರ ಆಧಾರದ ಮೇಲೆ ದೂರು ದಾಖಲಾಗಿದೆ.
ಸದ್ಯ ಸಾಕ್ಷಿ ದೂರದಾರ ಮಾಡಿರುವ ಸರಣಿ ಕೊಲೆ ಆರೋಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸರ್ಕಾರ ಎಸ್‌ಐಟಿ ರಚನೆ ಮಾಡಿರುವುದರ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ತನಿಖೆಗೆ ಎಸ್‌ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ ಎಂದಿರುವ ಅವರು ನ್ಯಾಯಸಮ್ಮತವಾದ ತನಿಖೆ ಮಾಡಿ ವರದಿ ಸಲ್ಲಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮಸ್ಥಳ ಹಿಂದೂಗಳ ಶ್ರದ್ಧಾ ಕೇಂದ್ರವಾಗಿದ್ದು, ಅದಕ್ಕೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಕೇರಳ ಸರ್ಕಾರ ಮಧ್ಯ ಪ್ರವೇಶ ಮಾಡುತ್ತಿದೆ. ನಗರ ನಕ್ಸಲರು ಪ್ರಕರಣದಲ್ಲಿ ಎಂಟ್ರಿಯಾಗುತ್ತಿದ್ದಾರೆ. ಅವರ ಪ್ರವೇಶದಿಂದ ತನಿಖೆ ದಿಕ್ಕು ತಪ್ಪುವ ಸಾಧ್ಯತೆಗಳಿವೆ ಎಂದರು.
ಧರ್ಮಸ್ಥಳ ಸರಣಿ ಕೊಲೆ | ತನಿಖೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳೇ ಹೇಳಿದ್ದಾರೆ: ಯತ್ನಾಳ್
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


