Wednesday, September 2, 2026
spot_img
More
    spot_img
    HomeLatest newsಧರ್ಮಸ್ಥಳ ಸರಣಿ ಕೊಲೆ | ತನಿಖೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳೇ ಹೇಳಿದ್ದಾರೆ: ಯತ್ನಾಳ್‌

    ಧರ್ಮಸ್ಥಳ ಸರಣಿ ಕೊಲೆ | ತನಿಖೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳೇ ಹೇಳಿದ್ದಾರೆ: ಯತ್ನಾಳ್‌

    ಕೊಪ್ಪಳ: ಇಂದಿನಿಂದ ( ಜುಲೈ 23 ) ಧರ್ಮಸ್ಥಳದಲ್ಲಿ ಸರಣಿ ಕೊಲೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭವಾಗಿದೆ. ಈ ಹಿಂದೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ತಾನೇ ಕೊಲೆಯಾದ ಹೆಣಗಳನ್ನು ಹೂತಿದ್ದು ಅವುಗಳನ್ನು ಅಗೆದು ತೋರಿಸಲು ಸಿದ್ಧ ಎಂದಿದ್ದು, ಆ ದೂರಿನ ಮೇರೆಗೆ ರಾಜ್ಯ ಸರ್ಕಾರ ಈ ಎಸ್‌ಐಟಿಯನ್ನು ರಚಿಸಿದೆ.

    Advertisement

    ಒಂದೆಡೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದರೆ, ಮತ್ತೊಂದೆಡೆ ಕೆಲ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡಿದ್ದಾರೆ. ಇದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧಕ್ಕೆಯುಂಟಾಗಬಾರದು ಎಂದಿದ್ದಾರೆ.

    ಇನ್ನು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಹ ಈ ಕುರಿತು ಮಾತನಾಡಿದ್ದು, ಎಸ್‌ಐಟಿ ರಚಿಸಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದು ಈ ಹಿಂದೆಯೇ ಧರ್ಮಾಧಿಕಾರಿಗಳು ಹೇಳಿದ್ದಾರೆ, ಅವರೇ ಸ್ವಾಗತ ಮಾಡಿದ್ದಾರೆ ಎಂದರು.

    ಅಲ್ಲದೇ ಹಿಂದೂ ಧರ್ಮ, ಜೈನ ಧರ್ಮ, ಸಿಖ್‌ ಹಾಗೂ ಬೌದ್ಧ ಧರ್ಮಗಳೆಲ್ಲವೂ ಭಾರತ ನೆಲದಲ್ಲಿ ಹುಟ್ಟಿದ ಧರ್ಮಗಳು ಇವುಗಳ ದೇವಾಲಯದ ಮೇಲೆ ಯಾವುದೇ ಹಾನಿಯುಂಟಾಗಬಾರದು, ಈ ಹಿಂದೆ ಶಬರಿಮಲೆ ಅಯ್ಯಪ್ಪ ದೇವಸ್ಥಾನವನ್ನು ಟಾರ್ಗೆಟ್‌ ಮಾಡಿದರು, ಆ ರೀತಿ ಇಲ್ಲಿ ಆಗಬಾರದು ಎಂದರು.

    ಭೂಮಿಯ ಮೇಲೆ ನಡೆಯಲು ಕಲಿಯುತ್ತಿರುವ ಶುಭಾಂಶು ಶುಕ್ಲಾ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading