ಇಂಡಿಯನ್ ಬ್ಯಾಂಕ್ ಹಲವಾರು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ indianbank.in ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜುಲೈ 18 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 7 ರವರೆಗೆ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ಇಂಡಿಯನ್ ಬ್ಯಾಂಕಿನಲ್ಲಿ ಒಟ್ಟು 1500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಪದವೀಧರ ಯುವಕರು ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬಹುದಾಗಿದೆ. ಈ ಹುದ್ದೆಗಳು ದೇಶದ ವಿವಿಧ ರಾಜ್ಯಗಳಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ತಮಗೆ ಅನುಕೂಲವಾಗುವ ರಾಜ್ಯದ ಪ್ರಕಾರ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರಗಳು
ಇಲಾಖೆ ಹೆಸರು ಇಂಡಿಯನ್ ಬ್ಯಾಂಕ್
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 1500 (ಕರ್ನಾಟಕ 42)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ಶೈಕ್ಷಣಿಕ ವಿದ್ಯಾರ್ಹತೆ
ಇಂಡಿಯನ್ ಬ್ಯಾಂಕ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಶೈಕ್ಷಣಿಕ ಅರ್ಹತೆಗಳನ್ನು ಪೂರೈಸಿರಬೇಕು:ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.ಯಾವುದೇ ಶಾಖೆಯಲ್ಲಿ ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.ಪದವಿ ಅರ್ಹತೆ 01 ಜುಲೈ 2025 ರಂದು ಪೂರ್ಣಗೊಂಡಿರಬೇಕು
ವಯೋಮಿತಿ: ಕಟ್ಆಫ್ ದಿನಾಂಕದಂದು ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳ ನಡುವೆ ಇರಬೇಕು. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ SC/ST/OBC/PWD ಇತ್ಯಾದಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 800 ರೂಪಾಯಿ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 175 ರೂಪಾಯಿ ನಿಗದಿ ಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದಾಗಿದೆ.
ಪಾವತಿ ವಿಧಾನ:
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬಹುದು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್ ಅಥವಾ ಇತರ ಆನ್‌ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿ ಮಾಡಲು ಅವಕಾಶವಿದೆ.
ವೇತನಶ್ರೇಣಿ
ಇಂಡಿಯನ್ ಬ್ಯಾಂಕ್‌ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವು ರಾಜ್ಯವಾರು / ಪ್ರದೇಶವಾರುವಾಗಿ ನಿಗದಿಪಡಿಸಲಾಗಿದೆ. ಈ ಶಿಷ್ಯ ವೇತನವನ್ನು (stipend) ನೇಮಕಾತಿ ಅಧಿಸೂಚನೆಯಲ್ಲಿಯೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ:ಪ್ರತಿ ತಿಂಗಳ ಶಿಷ್ಯ ವೇತನ ಮೆಟ್ರೋ ನಗರಗಳು – ₹15,000/-ಬೃಹತ್ ನಗರಗಳು – ₹12,000/-ಗ್ರಾಮೀಣ ಪ್ರದೇಶಗಳು – ₹10,000/-
ಭಾಷಾ ಅರ್ಹತೆ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.ಈ ಭಾಷಾ ಅರ್ಹತೆಯನ್ನು ತೋರಿಸಲು ಕೆಳಗಿನ ಯಾವುದೇ ದಾಖಲೆ ಇದ್ದರೆ ಪರಿಗಣಿಸಲಾಗುತ್ತದೆ 10ನೇ ತರಗತಿಯ ಸರ್ಟಿಫಿಕೇಟಿನಲ್ಲಿ ಸ್ಥಳೀಯ ಭಾಷೆ ಅಧ್ಯಯನವಾಗಿದೆ ಎಂದು ಪುರಾವೆ.ಅಥವಾ ಮಾನ್ಯ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದ ಪರೀಕ್ಷೆಯಲ್ಲಿ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


